ಬೆಂಗಳೂರು: 130 ಕಿ.ಮೀ. ಮೇಲ್ಸೇತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್‌ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ. ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ. ಡಬಲ್ ಡೆಕ್ಕರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಇದಕ್ಕೂ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
130 ಕಿ.ಮೀ. ಮೇಲ್ಸೇತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್‌ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ. ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ. ಡಬಲ್ ಡೆಕ್ಕರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಇದಕ್ಕೂ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು ಎಂದು ಉಪ… pic.twitter.com/hB8GhWE3XA
— DIPR Karnataka (@KarnatakaVarthe) July 7, 2025
“ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಚುನಾವಣೆ ನಡೆಸಬೇಕಿದೆ” ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆ ಸಂಬಂಧ ಸಚಿವ ಪರಮೇಶ್ವರ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಎತ್ತಿನಹೊಳೆ ವಿಚಾರವಾಗಿ ಕೆಲವು ಸಮಸ್ಯೆ ಇತ್ತು. ಅವರ ತಾಲೂಕನ್ನು ಕೈಬಿಡಬೇಕು ಎಂಬ ಪ್ರಸ್ತಾವನೆ ಇತ್ತು. ಈ ಭಾಗದಲ್ಲಿ ನೀರು ನಿಲ್ಲಿಸಬೇಕಾಗಿದ್ದು, ಯಾವುದೇ ಹಳ್ಳಿ ಮುಳುಗದಂತೆ ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ. ಸ್ಥಳೀಯರೇ ಒಂದೆರಡು ಕೆರೆಗಳ ಬಗ್ಗೆ ಸಲಹೆ ನೀಡಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು” ಎಂದು ತಿಳಿಸಿದರು.
ಖರ್ಗೆಗೆ ಖೆಡ್ಡಾ ತೋಡಿದ್ದ ಕಾಂಗ್ರೆಸ್ ಹೈಕಮಾಂಡ್ ಈಗ ಸಿದ್ಧರಾಮಯ್ಯಗೆ ತೋಡಿದೆ: ಛಲವಾದಿ ನಾರಾಯಣಸ್ವಾಮಿ