ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಸಾಗಾಣೆಯ ಅನುಕೂಲಕ್ಕಾಗಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಸರ್ಕಾರ ಕ್ರಮವಹಿಸಿದೆ. ಈ ಮೂಲಕ ಅಂಗಾಂಗ ದಾನಿಗಳಿಗೆ, ಅಂಗಾಂಗ ನೆರವಿರೋರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಅಪಘಾತ ಮತ್ತು ತುರ್ತು ಆರೈಕೆ ಕೇಂದ್ರವನ್ನು ಹೊಂದಿರುವ ವಿಕ್ಟೋರಿಯಾ ಆಸ್ಪತ್ರೆ, ಗ್ಯಾಸ್ಟ್ರೋ ಎಂಟರಾಲಜಿ ಸಂಸ್ಥೆ ಮತ್ತು ಮೂತ್ರಶಾಸ್ತ್ರ ಅಂಗಾಂಗ ಕಸಿ ಸಂಸ್ಥೆ, ಮಿಂಟೋ ಆಸ್ಪತ್ರೆಯಲ್ಲಿ ಪ್ರಾದೇಶಿಕ ನೇತ್ರಶಾಸ್ತ್ರ ಸಂಸ್ಥೆ ಮತ್ತು ಸ್ಕಿನ್ ಬ್ಯಾಂಕ್ – ಹೀಗೆ ಎಲ್ಲವನ್ನೂ ಹೊಂದಿರುವ ಆಸ್ಪತ್ರೆಗಳ ಪೈಕಿ ನಮ್ಮ ವಿಕ್ಟೋರಿಯಾ ಆಸ್ಪತ್ರೆ ದಕ್ಷಿಣ ಭಾರತದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ಇಲ್ಲಿ ಈಗ ನವೀಕೃತ ಕೇಂದ್ರ ಬರಲಿದೆ.
ಸಂಭಾವ್ಯ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳು ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. “ಈ ಯೋಜನೆಯು ಅತ್ಯಂತ ಅರ್ಥಪೂರ್ಣವಾಗಿದೆ. ಇದು ಬಡ ರೋಗಿಗಳಿಗೆ ಅನುಕೂಲವಾಗಲಿದೆ”ಎಂದು ಡಾ. ಪಾಟೀಲ್ ತಿಳಿಸಿದ್ದಾರೆ.
ಸಂಭಾವ್ಯ ಅಂಗಾಂಗ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಂಗಾಂಗ ಸಾಗಣೆಗೆ ಅನುಕೂಲ ಆಗಲೆಂದು ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ… pic.twitter.com/74mJESKcwT
— DIPR Karnataka (@KarnatakaVarthe) April 1, 2025
“ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಮಗ್ರ ಅಂಗಾಂಗ ಮರುಪಡೆಯುವಿಕೆ ಕೇಂದ್ರವನ್ನು ಪ್ರಾರಂಭಿಸುವುದರಿಂದ ಅಂಗಾಂಗ ದಾನ ಕಾರ್ಯಕ್ರಮವನ್ನು ಹೆಚ್ಚಿಸಲು ನಮಗೆ ಅವಕಾಶ ಸಿಗುತ್ತದೆ. ಇದರಿಂದ ಬಡವರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಹೇಳಿದ್ದಾರೆ.
“ಈ ಕೇಂದ್ರವು ಮೀಸಲಾದ ಸಿಬ್ಬಂದಿ, ಐಸಿಯು ಮತ್ತು ಹಾಸಿಗೆಗಳನ್ನು ಹೊಂದಿರುತ್ತದೆ. ಬೇಡಿಕೆ ಬಂದ ಕೂಡಲೇ ಕುಟುಂಬವು ಅನುಮೋದನೆ ನೀಡಿದ ನಂತರ ಐಸಿಯುಗಳಿಂದ ಮೀಸಲಾದ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ” ಎಂದು ಡಾ. ದೀಪಕ್ ಹೇಳಿದರು.
ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಏಪ್ರಿಲ್.15ರವರೆಗೆ ‘ಜಿಯೋ ಹಾಟ್‌ಸ್ಟಾರ್’ನಲ್ಲಿ ಐಪಿಎಲ್ ಕೊಡುಗೆ ವಿಸ್ತರಣೆ | Jio Hotstar