ರಾಮನಗರ: ರಾಮನಗರದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಮಮಂದಿರ ನಿರ್ಮಾಣಕ್ಕೆ ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.
BREAKING NEWS: ಗುತ್ತಿಗೆದಾರ ಸಂತೋಪ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಮತ್ತೆ ಸಂಕಷ್ಟ
ಮಂದಿರ ಅಭಿವೃದ್ಧಿ ಸಮಿತಿ ರಚಿಸಿ, ಸೂಕ್ತ ಪ್ರಸ್ತಾವನೆ ಸಲ್ಲಿಸಲು ರಾಮನಗರ ಡಿಸಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಂದ ರಾಮನಗರ ಡಿಸಿಗೆ ಪತ್ರ ಬಂದಿದೆ.ರಾಮದೇವರಬೆಟ್ಟದಲ್ಲಿ ರಾಮಮಂದಿರ ಸಂಬಂಧ ಪ್ರಸ್ತಾಪಿತ 19 ಎಕರೆಯ ಭೂದಾಖಲೆಗಳ ಸಂಪೂರ್ಣ ಮಾಹಿತಿ ಕಲೆ ಹಾಕಿ, ತಮ್ಮ ಸ್ಪಷ್ಟ ಅಭಿಪ್ರಾಯದ ಮೂಲಕ ಅಗತ್ಯ ಪ್ರಸ್ತಾಪನೆಯನ್ನು ತ್ವರಿತವಾಗಿ ಕಳಿಸುವಂತೆ ಸೂಚಿಸಲಾಗಿದೆ.