ಕೊಪ್ಪಳ : ಶೀಘ್ರವೇ ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.
ಇಂದು ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಶೀಘ್ರವೇ ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ, ಶೀಘ್ರವೇ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ, ನಮ್ಮ ಸರ್ಕಾರ ಹೇಳಿಕೆಗೆ ಬದ್ದವಾಗಿದೆ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ ಎಂದು ಹೇಳಿದ್ದಾರೆ.ಎಸ್.ಸಿ ಎಸ್ ಟಿ ಸಮುದಾಯದ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿ ಮತ್ತು 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು. ಶಾಲೆಗಳಿಗೆ ದೊಡ್ಡ ಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಈ ಯೋಜನೆಗೆ ನಮ್ಮ ಸರ್ಕಾರ ಪ್ರಾರಂಭಿಸಿದೆ. 8000 ಶಾಲಾ ಕೊಠಡಿಗಳ ನಿರ್ಮಾಣದ ಗುರಿಯಿದ್ದು, ಮುಂದಿನ ಎರಡು ಮೂರು ವರ್ಷಗಳಲ್ಲಿ ಇದೇ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಿದಂತಾಗುತ್ತದೆ ಎಂದು ಹೇಳಿದ್ದರು. ಇಂದು ಕೂಡ ಕೊಪ್ಪಳದಲ್ಲಿ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
GOOD NEWS : ರಾಜ್ಯದ 5 ಲಕ್ಷಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉದ್ಯೋಗ : ಸಿಎಂ ಬೊಮ್ಮಾಯಿ ಘೋಷಣೆ
2023 Election: ನಮ್ಮ ಸರ್ವೇ ಕ್ಲಿಯರ್, ನಾವು 136 ಸೀಟ್ ಗೆಲ್ಲುತ್ತೇವೆ, ಬಿಜೆಪಿ 60 ರಿಂದ 65 ಸ್ಥಾನ ಗೆಲುವು – DKS