ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದೆ. ಕಾಲೇಜು ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಇಬ್ಬರಿಗೆ ಗಾಯಗೊಳಿಸಿವೆ. ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ ಎಂಬುದಾಗಿ ಹೇಳಲಾಗುತ್ತಿದೆ.
ಬೆಂಗಳೂರಿನ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಅಟ್ಟ ಹಾಸ ಮೆರೆದಿದ್ದಾವೆ. ಬೆಂಗಳೂರು ವಿವಿಯ ಆವರಣದಲ್ಲಿ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವಿದೆ.
ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿಯಲ್ಲಿ 3ನೇ ಸೆಮಿಸ್ಟರ್ ವ್ಯಾಸಂಗವನ್ನು ವಿದ್ಯಾರ್ಥಿನಿಯರು ಮಾಡುತ್ತಿದ್ದರು. ಇಂತಹ ವಿದ್ಯಾರ್ಥಿನಿಯರಾದಂತ ಸೌಜನ್ಯ, ನಿಶ್ಚಿತ ಎಂಬುವರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ್ದಾವೆ.
ಬೀದಿ ನಾಯಿ ದಾಳಿಗೆ ಒಳಗಾದಂತ ಸೌಜನ್ಯ, ನಿಶ್ಚಿತಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರಲ್ಲಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ
JOB ALERT: ನೀವು SSLC, ದ್ವಿತೀಯ PUC ಪಾಸ್ ಆಗಿದ್ದೀರಾ.? ಹಾಗಿದ್ದರೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ