ವಿಜಯಪುರ : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸದ್ಯ ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯ ಡಾ.ಎಸ್.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ.
BIGG NEWS: ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ನಿಧನ
ಇನ್ನು ಜ್ಞಾನಯೋಗಾಶ್ರಮಕ್ಕೆ ಎಂ.ಬಿ.ಪಾಟೀಲ, ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ನಿಜಗುಣಾನಂದ ಸ್ವಾಮೀಜಿ, ಸಿಂದನೂರಿನ ಮಾಜಿ ಶಾಸಕ ಹಂಪನ ಗೌಡ ಮತ್ತು ಬಾದರ್ಲಿ ಶ್ರೀಗಳು ದರ್ಶನಕ್ಕೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಇತ್ತ, ಆಶ್ರಮದ ಸುತ್ತಮುತ್ತ ಪೊಲೀಸ್ ಇಲಾಖೆ ವಿಶೇಷ ಭದ್ರತೆ ಕೈಗೊಂಡಿದೆ. ಗದಗ, ಬಾಗಲಕೋಟೆ ಜಿಲ್ಲೆಯಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಎಸ್ಪಿ-5, ಸಿಪಿಐ-20, ಪಿಎಸ್ಐ-50, ಎಎಸ್ಐ -100, ಸಿಎಚ್ಸಿ-ಸಿಪಿಸಿ 1,000 ಸಿಬ್ಬಂದಿ ಇದ್ದಾರೆ.
ಇನ್ನು ಜ್ಞಾನಯೋಗಾಶ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರುಯ ಆಗಮಿಸುತ್ತಾರೆ.
BIGG NEWS: ಸಂಸದ ಬಿ.ವೈ. ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ನಿಧನ
ಮುಂಜಾನೆಯಿಂದಲೇ ಆಶ್ರಮದತ್ತ ಭಕ್ತರು ಆಗಮಿಸುತ್ತಿದ್ದಾರೆ. ಮಲ್ಲಿಕಾರ್ಜುನ್ ಶಿವಯೋಗಿಗಳ ಗದ್ದುಗೆ ಬಳಿ ಭಕ್ತರು ಸ್ವಾಮೀಜಿಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಶ್ರೀಗಳ ದರ್ಶನಕ್ಕೆ ಅವಕಾಶ ನೀಡುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ. ಮಠದಲ್ಲಿ ಭಕ್ತರಿಗೆ ಅನ್ನದಾಸೋಹ ವ್ಯವಸ್ಥೆ ಕೂಡ ನೀಡಲಾಗಿದೆ.
ಈಗಾಗಲೇ ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಹೀಗಿರುವಾಗ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂಬಿ ಪಾಟೀಲ್ ಕೂಡಾ ಶ್ರೀಗಳನ್ನು ನೋಡಲು ಆಗಮಿಸಲಿದ್ದಾರೆ.