ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ವಿರುದ್ಧ ಮತ್ತೆ ಗುತ್ತಿಗೆದಾರರ ಸಂಘ ಸಿಡಿದೆದ್ದಿದೆ. ಶೇ.40ರಷ್ಟು ಗುತ್ತಿಗೆಯಲ್ಲಿ ಕಮೀಷನ್ ಆರೋಪದಲ್ಲಿ ಹದಿನೈದು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ( Prime Minister Narendra Modi ) ಮತ್ತೊಮ್ಮೆ ಪತ್ರ ಬರೆಯೋದಾಗಿ ಹೇಳಿದೆ.
BIGG NEWS : ʻ ರಾಜ್ಯಾಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದುʼ : ಅಬಕಾರಿ ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯೆ
ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದಂತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಇದು ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ನನ್ನ ಸೇವಾ ಅವಧಿಯಲ್ಲೇ ಇಂತಹ ಸರ್ಕಾರವನ್ನ ನೋಡಿಲ್ಲ. ಶೇ.40% ಮಾತ್ರವಲ್ಲ ಕೆಲವು ಕಡೆ ಅದಕ್ಕಿಂತಲೂ ಹೆಚ್ಚು ಕಮೀಷನ್ ಕೇಳುತ್ತಿದ್ದಾರೆ. ನಾವು ಸಾಯೋಕು ಸಿದ್ಧ ಎಂಬುದಾಗಿ ಗುಡುಗಿದರು.
ಸಿಎಂ ಬಸವರಾಜ್ ಬೊಮ್ಮಾಯಿ ಒಳ್ಳೆಯ ಮನುಷ್ಯ. ಸಿಎಂ ಮಾತಿಗೆ ಕವಡೆ ಕಾಸಿನ ಬೆಲೆ ಇಲ್ಲ. ಸಿಎಂ ಆದೇಶ ನೀಡಿದರೂ ಹಣ ಬಿಡುಗಡೆ ಆಗುತ್ತಿಲ್ಲ. ಕೋರ್ಟ್ ಗೆ ಹೋಗಿ ಗುತ್ತಿಗೆ ಹಣ ಬಿಡಿಸಿಕೊಂಡಿದ್ದೇವೆ ಎಂದರು.
ಸಿದ್ಧರಾಮಯ್ಯ ಮಾಂಸ ತಿಂದೇ ಇಲ್ಲ ಅಂದ ಮೇಲೆ ಇನ್ನೇನು.? – ಎಂ.ಬಿ ಪಾಟೀಲ್
ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಕಲೆಕ್ಷನ್ ಮಾಡೋಕೆ ಹೇಳಿದ್ದಾರೆ. ಇವರಿಗೆಲ್ಲಾ ನಾಚಿಕೆಯಾಗಬೇಕು. ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೀಗೆ ಹೇಳಿದರೆ ಹೇಗೆ ? ಇವರಷ್ಟೇ ಅಲ್ಲಾ ಇನ್ನೂ ಹಲವು ಸಚಿವರು ಹೀಗೆ ಮಾಡುತ್ತಿದ್ದಾರೆ. ನಮ್ಮ ಸಂಘದ ಇಬ್ಬರಿಗೆ ತೊಂದರೆ ಕೊಟ್ಟಿದ್ದರು. ನಮ್ಮ ಸಂಘವನ್ನೇ ಒಡೆಯಲು ಮುಂದಾಗಿದ್ದರು ಎಂದು ಹೇಳಿದರು.
ಗುತ್ತಿಗೆಯಲ್ಲಿನ ಶೇ.40ರಷ್ಟು ಕಮೀಷನ್ ವಿಚಾರದಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇನೆ. ಸ್ವಾತಂತ್ರ್ಯ ದಿನಾಚರಣೆ ದಿನ ಭ್ರಷ್ಟಾಚಾರ ದೇಶಕ್ಕೆ ಮಾರಕವೆಂದು ಭಾಷಣ ಮಾಡಿದ್ದಾರೆ. ಇದನ್ನ ನಾವು ಸ್ವಾಗತಿಸುತ್ತೇವೆ. ಆದರೆ, ನಾವು ಕೊಟ್ಟಿನ ದೂರಿನ ಬಗ್ಗೆ ಇನ್ನೂ ಯಾಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
BIGG NEWS : ʻ ರಾಜ್ಯಾಧ್ಯಕ್ಷರ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದುʼ : ಅಬಕಾರಿ ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯೆ
ನಮ್ಮಹೋರಾಟ ಮುಂದುವರಿಯಲಿದೆ. ಅಧಿಕಾರಿಗಳು ಸಿಎಂ ಮಾತನ್ನು ಕೇಳದ ಸ್ಥಿತಿ ನಿರ್ಮಾಣವಾಗಿದೆ. ಟೆಂಡರ್ ಕರೆಯುವ ಪ್ರಕ್ರಿಯೆ ಬದಲಾಯಿಸಲು ಸಿಎಂ ಹೇಳಿದ್ದರು. ಆದರೆ ಸಿಎಂ ಮಾತೇ ಕೇಳ್ತಾ ಇಲ್ಲ. ನಾವು ಸಿದ್ದರಾಮಯ್ಯಗೆ ಯಾವುದೇ ದಾಖಲೆ ಕೊಟ್ಟಿಲ್ಲ. ದಾಖಲೆಗಳನ್ನ ಕೊಡುವುದು ದೊಡ್ಡದಲ್ಲ. ಕೊಟ್ಟ ಬಳಿಕ ದೊಡ್ಡ ಸಮಸ್ಯೆಗಳು ಆಗುತ್ತೆ. ತನಿಖೆ ಮಾಡಿದಾಗ ದಾಖಲೆ ಕೊಡುತ್ತೇವೆ. ನ್ಯಾಯಾಂಗ ತನಿಖೆ ನಡೆಸಲಿ ಎಂದು ಒತ್ತಾಯಿಸಿದರು.
ಈಗ ಸಂಪೂರ್ಣ ವ್ಯವಸ್ಥೆಯೇ ಹದಗೆಟ್ಟಿದೆ. ಕೆಲ ಸಚಿವರು, ಪಿಡಬ್ಲುಡಿ ಸಚಿವರು ನಮ್ಮ ಸಂಘಟನೆ ಒಡೆಯಲು ಪ್ರಯತ್ನ ಮಾಡಿದ್ರು. 22 ಸಾವಿರ ಕೋಟಿ ರೂ ಬಿಲ್ ಬಾಕಿ ಇದೆ. ಮೂರು ವರ್ಷಗಳಿಂದ ಬಿಲ್ ಬಾಕಿ ಇದೆ. ಸಿದ್ದರಾಮಯ್ಯಗೆ ಕೆಲವೊಂದು ಮಾಹಿತಿಗಳನ್ನ ನೀಡಿದ್ದೇನೆ. ಸದನದಲ್ಲಿ ಈ ವಿಚಾರವನ್ನ ಪ್ರಸ್ತಾಪಿಸುತ್ತೇನೆ ಎಂದಿದ್ದಾರೆ ಎಂದರು.
Shocking: ತೆಲಂಗಾಣದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಗರ್ಭಿಣಿಯಾದ 6 ನೇ ತರಗತಿ ವಿದ್ಯಾರ್ಥಿನಿ
ದಾಖಲೆ ಯಾರಿಗೆ ಕೊಟ್ಟರೂ ಯಾರು ಕೊಟ್ಟರು ಅಂತ ಗೊತ್ತಾಗುತ್ತದೆ. ಭಯ ಇದೆ, ನಮ್ಮ ಗುತ್ತಿಗೆದಾರರಿಗೆ ಭಯ ಇದೆ. ಸಮಯ ಬಂದಾಗ ಮತ್ತಷ್ಟು ಮಾಹಿತಿ ಕೊಡುತ್ತೇವೆ. ಎಲ್ಲ ಎಂಎಲ್ಎಗಳು 10-15% ಕೇಳ್ತಿದ್ದಾರೆ. ಇಡೀ ವ್ಯವಸ್ಥೆ ಸಂಪೂರ್ಣ ಭ್ರಷ್ಟಾಚಾರದಿಂದ ಕೂಡಿದೆ. ಒಬ್ಬರು, ಇಬ್ಬರು ಅಂತ ಇಲ್ಲ, ಯಾರಿಗೂ ರ್ಯಾಂಕಿಂಗ್ ಕೊಡಲು ಆಗುವುದಿಲ್ಲ. ಎಲ್ಲ ಸಚಿವರು, ಶಾಸಕರು ನಂಬರ್ 1 ಸ್ಥಾನದಲ್ಲಿದ್ದಾರೆ. ಬಸವರಾಜ್ ಬೊಮ್ಮಾಯಿ ಸೇರಿ ಎಲ್ಲರೂ ಭ್ರಷ್ಟರಾಗಿದ್ದಾರೆ. ಕೆಲವು ಕಡೆ 100% ಭ್ರಷ್ಟಾಚಾರ ಇದೆ. ಕೆಲವು ಕಡೆ ಒಂದು ಪೈಸೆ ಕೆಲಸ ಮಾಡದೇ 100% ತಿಂದಿಲ್ವಾ? ಎಂಬುದಾಗಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದರು.
BIG NEWS: ಮತ್ತೆ ಜೀವ ಪಡೆದ 40% ಕಮೀಷನ್ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರ ಸಂಘ