ಬೆಂಗಳೂರು: ರಾಜ್ಯದಲ್ಲಿ ರಸ್ತೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮಾಡಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಮಾಡಿದ್ದೇ ಆದರೇ ಅಂತ ಗುತ್ತಿಗೆದಾರರು, ಇಂಜಿನಿಯರ್ ಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿದೆ.
ಈ ಕುರಿತಂತೆ ಮಾತನಾಡಿರುವಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಪಶ್ಚಿಮ ಘಟ್ಟದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸಲು ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಆನೆಗಳು ನಾಡಿಗೆ ಬಂದಾಗ ಅವುಗಳನ್ನು ಮರಳಿ ಕಾಡಿಗೆ ಕಳುಹಿಸಲು ರಾಪಿಡ್ ರೆಸ್ಪಾನ್ಸ್ ಟೀಮ್ -ಆರ್.ಆರ್.ಟಿ. ಅಂದರೆ ಕ್ಷಿಪ್ರ ಸ್ಪಂದನಾ ಪಡೆಗಳು, ಎಲಿಫೆಂಟ್ ಟಾಸ್ಕ್ ಫೋರ್ಸ್ -ಇ.ಟಿ.ಎಫ್. ಅಂದರೆ ಆನೆ ಕಾರ್ಯ ಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಈಶ್ವರ ಖಂಡ್ರೆ, ತಾವು ಅರಣ್ಯ ಸಚಿವರಾದ ತರುವಾಯ ಬೆಂಗಳೂರು ಗ್ರಾಮಾಂತರ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ಎರಡು ಆನೆ ಕಾರ್ಯಪಡೆಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಿದ್ದಾಗಿ ತಿಳಿಸಿದರು.
ಪ್ರಸ್ತುತ ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಬನ್ನೇರುಘಟ್ಟ, ಬಂಡೀಪುರ ಸೇರಿ 8 ಜಿಲ್ಲೆಗಳಲ್ಲಿ ಕಾರ್ಯಪಡೆಗಳಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ, ಆನೆಗಳ ಚಲನ ವಲನದ ಬಗ್ಗೆ ಜನರಿಗೆ ಎಸ್.ಎಂ.ಎಸ್., ವಾಟ್ಸ್ ಅಪ್ ಸಂದೇಶದ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.
ಆನೆಗಳು ಸಾಮಾನ್ಯವಾಗಿ ಆಹಾರ ಮತ್ತು ನೀರು ಅರಸಿ ನಾಡಿಗೆ ಬರುತ್ತಿವೆ. ಹೀಗಾಗಿ ಅರಣ್ಯದೊಳಗೆ ವನ್ಯ ಜೀವಿಗಳಿಗೆ ಅದರಲ್ಲೂ ಆನೆಗಳಿಗೆ ಅಗತ್ಯ ಆಹಾರ, ನೀರು ಸಿಗುತ್ತಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಕ್ರಮ ವಹಿಸಲಾಗಿದೆ. ಕಳೆದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾದಾಗ, ಅರಣ್ಯ ಪ್ರದೇಶದೊಳಗಿನ ನೀರುಗುಂಡಿ ಅಂದರೆ ವಾಟರ್ ಹೋಲ್ ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ಕೊಳವೆ ಬಾವಿಗಳಿಗೆ ಅಳವಡಿಸಲಾದ ಸೌರ ಪಂಪ್ ಗಳ ಮೂಲಕ ನಿರಂತರವಾಗಿ ನೀರು ಲಭ್ಯವಾಗುವಂತೆ ಮಾಡಲಾಯಿತು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ನಾಗರಹೊಳೆ, ಬಂಡೀಪುರ, ಬಿಆರ್.ಟಿ. ಮೊದಲಾದ ಕಡೆಗಳಲ್ಲಿ ವ್ಯಾಪಕವಾಗಿ ಬೆಳೆಯುತ್ತಿರುವ ಲಾಂಟನಾ, ಸನ್ನಾದಂತಹ ಕಳೆಯಿಂದಲೂ ಆನೆಗಳಿಗೆ ಹುಲ್ಲು, ತೊಗಟೆ, ಎಲೆ, ಸೊಪ್ಪು ಮತ್ತು ನೀರು ಸರ್ವ ಋತುವಿನಲ್ಲೂ ಲಭ್ಯವಾಗುವಂತೆ ಮಾಡಲು ಮತ್ತು ಲಾಂಟನಾ ಕಳೆ ನಿರ್ಮೂಲನೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದೂ ವಿವರ ನೀಡಿದರು.
ಸೇನಾ ಹೆಲಿಕಾಪ್ಟರ್ ಮೂಲಕ ಅಗರ್ತಲಾಗೆ ಬಂದಿಳಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ: ವರದಿ
ಕೊಲೆ ಆರೋಪಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮೀ: ಬನಶಂಕರಿ ದೇವಿಯ ಪ್ರಸಾದ ನೀಡಿಕೆ