ಬೆಂಗಳೂರು: ಇಂದಿನಿಂದ ಫ್ರೀಡಂ ಪಾರ್ಕ್ ನಲ್ಲಿ ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಚಿವ ಮುನಿರತ್ನ ಭರವಸೆಗೆ ಬಗ್ಗದೇ, ಮುಷ್ಕರ ಹಿಂತೆಗೆದುಕೊಳ್ಳದೇ ಮುಷ್ಕರ ಮುಂದುವರೆಸೋ ನಿರ್ಧಾರವನ್ನು ಕೈಗೊಂಡಿದ್ದಾರೆ.
ಈ ಕುರಿತಂತೆ ನಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ನೀಡಿದಂತ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾದ್ಯ ಯಮೋಜಿ, ಇಂದಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಾಗುತ್ತಿದೆ. ಮುಷ್ಕರ ನಿರತ ಸ್ಥಳಕ್ಕೆ ಸಚಿವ ಮುನಿರತ್ನ ಭೇಟಿ ನೀಡಿ, ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಆದ್ರೇ ನಾವು ಭರವಸೆಗೆ ಒಪ್ಪಿ, ಮುಷ್ಕರ ಹಿಂತೆಗೆದುಕೊಳ್ಳುವುದಿಲ್ಲ ಎಂದರು.
ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಭರವಸೆಯನ್ನು ನಮ್ಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೇ ನಮ್ಮ ಬೇಡಿಕೆಯನ್ನು ಈಡೇರಿಸೋವರೆಗೂ ಮುಷ್ಕರ ಹಿಂತೆಗೆದುಕೊಳ್ಳುವುದಿಲ್ಲ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಕೇವಲ ಬಾಯಿ ಮಾತಿನ ಭರವಸೆ ನಮಗೆ ಬೇಕಿಲ್ಲ. ಆದೇಶದಲ್ಲಿ ತಿಳಿಸಿದಾಗಲೇ ನಮ್ಮ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಫೆಬ್ರವರಿ 9ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಘದೊಂದಿಗೆ ಬೇಡಿಕೆ ಈಡೇರಿಕೆ ಸಂಬಂಧ ಚರ್ಚಿಸೋದಕ್ಕೆ ಸಭೆ ಕರೆಯಲಾಗಿದೆ. ಅಂದು ಸಂಜೆ ನಡೆಯುವಂತ ಸಿಎಂ ಜೊತೆಗಿನ ಸಭೆಯಲ್ಲಿ ನಮ್ಮ ಬೇಡಿಕೆಗಳನ್ನು ಮುಂದಿಡುತ್ತೇವೆ. ಆ ಬೇಡಿಕೆಯನ್ನು ಭರವಸೆಯಾಗಿ ತಿಳಿಸದೇ ಈಡೇರಿಕೆಯ ನಿರ್ಧಾರ ಪ್ರಕಟಿಸೋ ನಂಬಿಕೆ ಇದೆ. ಅಲ್ಲಿಯವರೆಗೆ ನಮ್ಮ ಮುಷ್ಕರ ಮುಂದುವರೆಯಲಿದೆ ಎಂದರು.
BIGG NEWS : ಬೆಂಗಳೂರಲ್ಲಿ ಹೆಲ್ಮೆಟ್ ಧರಿಸದೆ ವೀಲಿಂಗ್ ಮಾಡ್ತಿದ್ದ ಬೈಕ್ ಸವಾರ ಅರೆಸ್ಟ್ : ದ್ವಿಚಕ್ರವಾಹನ ವಶಕ್ಕೆ
ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ