ಬೆಂಗಳೂರು : ರಾಜ್ಯದಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಸಮಸ್ಯೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತಾಲೂಕು ಮಟ್ಟದಲ್ಲಿ ನಿಯಂತ್ರಣಾ ಕೊಠಡಿ ಮತ್ತು ಸಹಾಯವಾಣಿ ಕೇಂದ್ರ ಸ್ಥಾಪಿಸಿ ದೂರು ಬಂದ ಕೂಡಲೆ ನೀರು ಪೂರೈಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಿನ್ನೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಕುರಿತು ಪರಿಶೀಲನ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿಇಒ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸದ್ಯ ರಾಜ್ಯದಲ್ಲಿ ಅಷ್ಟಾಗಿ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಸಮಸ್ಯೆ ಹೆಚ್ಚುವ ಅಂದಾಜಿದೆ. ಹೀಗಾಗಿ ಗ್ರಾಮ ಮಟ್ಟದಲ್ಲಿ ಕಾಣಿಸಿಕೊಳ್ಳುವ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ದೂರುಗಳನ್ನು ಸ್ವೀಕರಿಸಿ, ಕೂಡಲೇ ನೀರು ಪೂರೈಕೆಗೆ ನೆರವಾಗುವಂತೆ ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿ ಮತ್ತು ಸಹಾಯವಾಣಿ ಕೇಂದ್ರ ಸ್ಥಾಪಿಸಲು ಹೇಳಲಾಗಿದೆ.
‘ಜಾತಿ ಗಣತಿ’ ಕುರಿತಂತೆ ಸುದೀರ್ಘ ವಿಚಾರಣೆ ಅಗತ್ಯವಿರುವುದರಿಂದ ಸದ್ಯ ಯಾವುದೇ ಆದೇಶ ನೀಡಲ್ಲ : ಹೈಕೋರ್ಟ್ ಸ್ಪಷ್ಟನೆ
ಅದರ ಜತೆಗೆ ಪ್ರತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳಲ್ಲಿ ಬರುವ ಸುದ್ದಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ನೈಜ ಸಮಸ್ಯೆಯನ್ನು ಗುರುತಿಸಿ ಪರಿಹರಿಸುವಂತೆ ಸೂಚಿಸಲಾಗಿದೆ ಎಂದರು.