ಸುಭಾಷಿತ :

Monday, March 30 , 2020 12:19 AM

ಪ್ರಧಾನಿ ಮೋದಿ, ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್ ಗತಿಯೇ ಬರಲಿದೆ : ಸ್ವಾಮೀಜಿಗಳಿಂದ ವಿವಾದಾತ್ಮಕ ಹೇಳಿಕೆ


Saturday, February 22nd, 2020 9:14 am

ರಾಯಚೂರು : ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್ ಗೆ ಆದ ಗತಿಯೇ ಆಗುತ್ತದೆ ಎಂದು ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 2 ರಂದು ನಡೆದ ಧರ್ಮ ಸಮ್ಮೇಳನದಲ್ಲಿ ಮಾತನಾಡಿರುವ ಸ್ವಾಮೀಜಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಮಾತನಾಡುವವರಿಗೆ ಗೌರಿ ಲಂಕೇಶ್ ಗೆ ಆದ ಗತಿಯೇ ಅಗುತ್ತದೆ, ಇನ್ನೂ 14-15 ವಯಸ್ಸು ದಾಟದವರು ಕೂಡ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡುತ್ತಿದ್ದಾರೆ. ಭವಿಷ್ಯದಲ್ಲಿ ಅವರಿಗೂ ಗೌರಿ ಲಂಕೇಶ್ ಗೆ ಆದ ಗತಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಭಾಷಣ ಮಾಡಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿರುವ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಸ್ವಾಮೀಜಿಗಳ ಭಾಷಣದ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions