ಬೀದರ್: ಬೀದರ್ ಗವಾನ್ ಮಸೀದಿಯಲ್ಲಿ ಪೂಜೆ ವಿಚಾರ ವಿವಾದ ಸೃಷ್ಟಿಸಿದ ಹಿನ್ನೆಲೆ ಈಗಾಗಲೇ ಗವಾನ್ ಯುನಿವರ್ಸಿಟಿ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ. ಈಗಾಗಲೇ 200ಕ್ಕೂ ಹೆಚ್ಚು ಪೊಲೀಸರು ಮೊಕ್ಕಂ ಹೂಡಿದ್ದಾರೆ. ಎಲ್ಲಾ ರೀತಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ.
BREAKING NEWS: ಬೀದರ್ನ ಮದರಸಾಗೆ ನುಗ್ಗಿ ದುರ್ಗಾ ಪೂಜೆ ಸಲ್ಲಿಸಿದ ಗುಂಪು; 9 ಮಂದಿ ವಿರುದ್ಧ ಪ್ರಕರಣ ದಾಖಲು
ಬೀದರ್ ಗವಾನ್ ಮಸೀದಿ ವಿವಾದವೇನು ?
ಬೀದರ್ನಲ್ಲಿ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಗುಂಪೊಂದು ಬುಧವಾರ ರಾತ್ರಿ ಪಾರಂಪರಿಕ ಮದರಸಾವೊಂದಕ್ಕೆ ಮದರಸಾ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ, ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಲ್ಲದೆ ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕಿ ಪೂಜೆ ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿ 9 ಮಂದಿ ವಿರುದ್ಧ ದೂರು ದಾಖಲಾಗಿದೆ.
ಆರೋಪಕ್ಕೆ ಸಂಬಂಧಿಸಿ 9 ಮಂದಿ ವಿರುದ್ಧ ಬೀದರ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಖಂಡಿಸಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
BREAKING NEWS: ಬೀದರ್ನ ಮದರಸಾಗೆ ನುಗ್ಗಿ ದುರ್ಗಾ ಪೂಜೆ ಸಲ್ಲಿಸಿದ ಗುಂಪು; 9 ಮಂದಿ ವಿರುದ್ಧ ಪ್ರಕರಣ ದಾಖಲು
ಈ ಸಂಬಂಧ ಒಂಬತ್ತು ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಬೀದರ್ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿವೆ. ಶುಕ್ರವಾರ(ಇಂದು)ದೊಳಗೆ ಅವರನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಬೆದರಿಕೆ ಹಾಕಿವೆ.
ಇನ್ನು 1460 ರ ದಶಕದಲ್ಲಿ ನಿರ್ಮಿಸಲಾದ ಬೀದರ್ನಲ್ಲಿರುವ ಮಹ್ಮದ್ ಗವಾನ್ ಮದರಸಾವು ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ರಚನೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳಲ್ಲಿ ಪಟ್ಟಿಮಾಡಲಾಗಿದೆ.
BREAKING NEWS: ಬೀದರ್ನ ಮದರಸಾಗೆ ನುಗ್ಗಿ ದುರ್ಗಾ ಪೂಜೆ ಸಲ್ಲಿಸಿದ ಗುಂಪು; 9 ಮಂದಿ ವಿರುದ್ಧ ಪ್ರಕರಣ ದಾಖಲು
ಪೂಜೆ ಮಾಡಲು ಒಳಗೆ ಈ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ. ಇದಕ್ಕೂ ಮುನ್ನ ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ಅವರು “ಜೈ ಶ್ರೀ ರಾಮ್” ಮತ್ತು “ಹಿಂದೂ ಧರ್ಮ ಜೈ” ಘೋಷಣೆಗಳನ್ನು ಕೂಗಿದ್ದಾರೆ. ಇದರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ. ಹಾಗಾಗಿ ಗವಾನ್ ಯುನಿವರ್ಸಿಟಿ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ.