ಬೆಂಗಳೂರು: ರಾಜ್ಯಾದ್ಯಂತ 2030ರೊಳಗೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ವಿದ್ಯುತ್ ಚಾಲಿತ ಬಸ್ಸುಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ತಿಳಿಸಿದರು.
ಅವರು ಬುಧವಾರ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ತನ್ವೀರ್ ಸೇಠ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 90 ವಿದ್ಯುತ್ ಚಾಲಿತ ಬಸ್ಸುಗಳನ್ನು ಗುತ್ತಿಗೆ ಆಧಾರದ ಮೇಲೆ 2021ರ ಡಿಸೆಂಬರ್ ನಿಂದ ಕಾರ್ಯಾಚರಣೆ ಮಾಡಲಾಗಿದೆ ಎಂದರು. ಕೇಂದ್ರ ಸರ್ಕಾರದ ಫೇಮ್-2 ಯೋಜನೆಯಡಿಯಲ್ಲಿ 300 ವಿದ್ಯತ್ ಚಾಲಿತ ಬಸ್ಸುಗಳಿಗೆ ಆದೇಶವನ್ನು ನೀಡಿದ್ದು, ಅವುಗಳಲ್ಲಿ 75 ಬಸ್ಸುಗಳ ಕಾರ್ಯಾಚರಣೆಯನ್ನು ಆಗಸ್ಟ್ 15 ರಿಂದ ಪ್ರಾರಂಭಿಸಲಾಗಿದೆ ಎಂದರು