Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ
KARNATAKA

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

By kannadanewsnow0910/01/2026 5:57 PM

ಬೆಂಗಳೂರು: ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ವಾಕ್‌ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕಿತ್ತು. ಇಂತಹ ಮಸೂದೆ ತರುವಾಗ ಅದು ಜನರ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನೋಡಬೇಕಾಗುತ್ತದೆ. ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿಸಿದ ಸಂವಿಧಾನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವಿದೆ. ವಿಧಾನಸಭೆ ಇರುವುದು ಮಸೂದೆ ಮಂಡನೆ ಹಾಗೂ ಚರ್ಚೆಗೇ ಹೊರತು ಗಲಾಟೆ ಮಾಡುವುದಕ್ಕಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಇದರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾನು ಮಸೂದೆಯ ಬಗ್ಗೆ ಚರ್ಚೆ ಮಾಡಲು ಮುಂದಾದಾಗ ಕಾಂಗ್ರೆಸ್‌ ಶಾಸಕರು, ಸಚಿವರು ಭಯಗೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಿದರು. ಈ ವಿಚಾರದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರ ನಡೆಯೂ ನನಗೆ ಬೇಸರ ತಂದಿದೆ ಎಂದರು.

ಬಿಜೆಪಿಯಲ್ಲಿ 15 ಶಾಸಕರು ಈ ಬಗ್ಗೆ ಮಾತನಾಡುವುದಿತ್ತು. ಬಳಿಕ ಮಸೂದೆಯನ್ನು ಸದನ ಸಮಿತಿಗೆ ಒಪ್ಪಿಸಬೇಕೆಂದು ತೀರ್ಮಾನಿಸಿದ್ದೆವು. ಆದರೆ ಏಕಾಏಕಿ ಮಸೂದೆ ಪಾಸ್‌ ಮಾಡಲಾಗಿದೆ. ಈಗ ಅದು ರಾಜ್ಯಪಾಲರ ಬಳಿಗೆ ಹೋಗಿದೆ. ಸೋಮವಾರ ನಾನು, ರಾಜ್ಯಾಧ್ಯಕ್ಷರು ಹಾಗೂ ಇತರ ಮುಖಂಡರು ರಾಜ್ಯಪಾಲರ ಬಳಿಗೆ ಹೋಗಿ ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಇದು ಜನರ ಹಾಗೂ ಮಾಧ್ಯಮಗಳ ಸ್ವಾತಂತ್ರ್ಯ ಕಸಿಯುವ ಮಸೂದೆ. ತುರ್ತು ಪರಿಸ್ಥಿತಿ ತಂದು ವಾಕ್‌ ಸ್ವಾತಂತ್ರ್ಯ ಕಸಿದುಕೊಂಡಂತೆಯೇ ಇಲ್ಲಿ ಮಸೂದೆ ಮೂಲಕ ಸ್ವಾತಂತ್ರ್ಯ ಕಸಿಯಲಾಗುತ್ತಿದೆ. ನಮ್ಮ ಅಹವಾಲಿಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಆದ್ದರಿಂದ ರಾಜ್ಯಪಾಲರ ಬಳಿಗೆ ಹೋಗುತ್ತಿದ್ದೇವೆ. ರಾಜ್ಯಪಾಲರು ಮೀಸಲಾತಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಕೇಳಿದ್ದಾರೆ. ಯಾವುದೇ ಕಾನೂನು ತರುವಾಗ ಹೀಗೆಯೇ ಚರ್ಚೆ ಮಾಡಬೇಕಾಗುತ್ತದೆ ಎಂದರು.

ಕೇರಳದ ಕನ್ನಡ ಶಾಲೆಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯನವರ ಆಪ್ತ ಪಾಲುದಾರರಾದ ಮುಖಂಡರೇ ಇದನ್ನು ಮಾಡಿದ್ದಾರೆ. ಇದರಲ್ಲಿ ಸಿಎಂ, ಡಿಸಿಎಂ ಕೈವಾಡ ಇದ್ದು, ಈ ಎಲ್ಲ ಬೆಳವಣಿಗೆಗಳು ಅವರಿಗೆ ಮೊದಲೇ ಗೊತ್ತಿತ್ತು. ನೀನು ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎಂದು ಮೊದಲೇ ತೀರ್ಮಾನಿಸಿಕೊಂಡಿದ್ದರು. ಇವರ ಬ್ರದರ್‌ಗಳು ಎಲ್ಲವನ್ನೂ ಮೊದಲೇ ಚರ್ಚೆ ಮಾಡಿಕೊಂಡು ಮ್ಯಾಚ್‌ ಫಿಕ್ಸಿಂಗ್‌ ಮಾಡಿದ್ದಾರೆ. ಮುಖ್ಯಮಂತ್ರಿಗಳು ಕೇರಳಕ್ಕೆ ಪತ್ರ ಬರೆದಿರುವುದು ಕೂಡ ಮೊದಲೇ ಹೊಂದಾಣಿಕೆ ಮಾಡಿಕೊಂಡಿರುವುದರ ಭಾಗ. ಕೇರಳ ಸಿಎಂ ಬುಲ್ಡೋಜರ್‌ ಎಂದಾಗ ಅದಕ್ಕೆ ಸಿಎಂ ಸಿದ್ದರಾಮಯ್ಯ ಏನೂ ಹೇಳಲಿಲ್ಲ. ಇದು ಕನ್ನಡಕ್ಕೆ ದ್ರೋಹ ಬಗೆದ ಸರ್ಕಾರ. ವೇದಿಕೆಯಲ್ಲಿ ಕೇರಳ ಮುಖ್ಯಮಂತ್ರಿಯನ್ನು ಭೇಟಿ ಮಾಡಿದಾಗಲೇ ಈ ಬಗ್ಗೆ ಚರ್ಚೆ ಮಾಡಬೇಕಿತ್ತು. ಎಲ್ಲದಕ್ಕೂ ಮೋದಿಯಿಂದ ಅನ್ಯಾಯ ಎನ್ನುತ್ತಾರೆ. ಈಗ ಇದನ್ನು ಏಕೆ ಅನ್ಯಾಯ ಎಂದು ಹೇಳುತ್ತಿಲ್ಲ? ಸಿಎಂ ಸಿದ್ದರಾಮಯ್ಯ ಕನ್ನಡಕ್ಕೆ ಮಾರಕವಾದ ನಡೆ ಇಟ್ಟಿದ್ದಾರೆ. ಇದರ ವಿರುದ್ಧ ತೀವ್ರ ಪ್ರತಿಭಟನೆ ಮಾಡಲಿ. ಇಲ್ಲವಾದರೆ ಇದರಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಶಾಮೀಲಾಗಿದ್ದಾರೆ ಎಂದೇ ಭಾವಿಸುತ್ತೇವೆ ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM2 Mins Read

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM3 Mins Read

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read
Recent News

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

21/02/2026 5:46 AM

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM
State News
KARNATAKA

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave

By kannadanewsnow0921/02/2026 5:46 AM KARNATAKA 2 Mins Read

ಬಳ್ಳಾರಿ : ಬೇಸಿಗೆ ಆರಂಭವಾಗಲಿದ್ದು, ಬಿಸಲಿನ ತಾಪಮಾನದ ಅಲೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆ ಇರುವುದರಿಂದ ಆರೋಗ್ಯದ…

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.