ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ.
ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದೀಗ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುವ ಕೆಲಸದಲ್ಲಿ ಎನ್ಐಎ ಅಧಿಕಾರಿಗಳು ನಿರತರಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BIGG NEWS: ದಶಪಥ ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ನಿಲುಗಡೆಯಾಗಬೇಕು : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್
ಹಾವೇರಿ ಸಾಹಿತ್ಯ ಸಮ್ಮೇಳನ: ಜೋಶಿಯಿಂದ ಲೇಖಕಿಯರಿಗೆ ಅವಮಾನ – ಡಾ. ಎಚ್.ಎಲ್. ಪುಷ್ಪಾ ಕಿಡಿ
ರಾಜ್ಯ ಬಿಜೆಪಿಗರಿಗೆ ದ್ವೇಷವೇ ಮಾಡೆಲ್: #BJPHatePolitics ‘ಟ್ವಿಟ್ಟರ್ ಟ್ಯಾಗ್’ನಲ್ಲಿ ಕಾಂಗ್ರೆಸ್ ಕುಟುಕು