ಉತ್ತರ ಪ್ರದೇಶ : ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಎಂಟು ವರ್ಷದ ಬಾಲಕ ಸೇರಿದಂತೆ ಆತನ ಕುಟುಂಬದ ಐವರು ಗಂಭೀರವಾಗಿ ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ.
ನಗರದ ‘ಬಕ್ಷಿ ಕಾ ತಲಾಬ್’ (ಬಿಕೆಟಿ) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.
ಗಾಯಗೊಂಡವರಲ್ಲಿ ಎಂಟು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಮೃತನನ್ನು 30 ವರ್ಷದ ಜುಬೈರ್ ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಸಲ್ಮಾನ್ (25), ಸೈಫ್ (17), ಸಮರ್ (8 ತಿಂಗಳು), ಶಬ್ನಮ್ (35) ಮತ್ತು ಝಾಕಿರಾ (50) ಎಂದು ಗುರುತಿಸಲಾಗಿದೆ. ಅವರನ್ನು ಕೆಜಿಎಂಯು ಟ್ರಾಮಾ ಸೆಂಟರ್ ಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸಂತ್ರಸ್ತರನ್ನು ರಕ್ಷಿಸಿದರು. ಸ್ಫೋಟದಿಂದಾಗಿ ನೆರೆಹೊರೆಯ ಮನೆಗಳಿಗೂ ಹಾನಿಯಾಗಿದೆ.
ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ವರ್ಷದ ಜುಲೈನಲ್ಲಿ ಪಂಜಾಬ್ನ ಫಜಿಲ್ಕಾ ಜಿಲ್ಲೆಯ ಜಲಾಲಾಬಾದ್ ಪ್ರದೇಶದಲ್ಲಿ ಮದುವೆ ಸಮಾರಂಭದ ವೇಳೆ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು.
ಮೇ ತಿಂಗಳಲ್ಲಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಮನೆಯ ಗೋಡೆ ಕುಸಿದು ಕನಿಷ್ಠ ನಾಲ್ವರು ಮೃತಪಟ್ಟು, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು.
ಈ ವರ್ಷದ ಮಾರ್ಚ್ನಲ್ಲಿ ರಾಷ್ಟ್ರ ರಾಜಧಾನಿಯ ರಂಜೀತ್ ನಗರ ಪ್ರದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದರು.