ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ದಿಢೀರ್ ಯುದ್ಧದ ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದೆಲ್ಲ ಗೊತ್ತಿದ್ದೂ ಕಾಂಗ್ರೆಸ್‍ನವರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದಾರೆ. ಇದು ಕಾಂಗ್ರೆಸ್‍ನವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ವಿಧಾನಸೌದ ಬಳಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದಾಖಲೆಯ ಬಜೆಟ್ ಮಂಡಿಸಿದರು. ಆದರೆ ರಾಜ್ಯದ ಪರಿಸ್ಥಿತಿ ಎಲ್ಲಿಗೆ ಬಂದು ಮುಟ್ಟಿದೆ ಎಂದರೆ ಪೆÇಲೀಸ್ ಇಲಾಖೆಯಲ್ಲಿ ಸಿಬ್ಬಂದಿಗೆ ವೇತನ ಕೊಡಲೂ ಸಾಧ್ಯವಾಗಿಲ್ಲ. ಕಳೆದ ಫೆಬ್ರುವರಿ ತಿಂಗಳ ವೇತನವನ್ನೇ ನೀಡಲಾಗದ ಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ರಾಜ್ಯ ದಿವಾಳಿಯತ್ತ ಸಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.
ದಾಖಲೆಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಸುವರ್ಣ ಅವಕಾಶ ಇತ್ತು. ಆದರೆ ಅವರು ಅದನ್ನು ಬಳಸಿಕೊಳ್ಳಲಿಲ್ಲ. ಎಲ್ಲವನ್ನೂ ಕೈಚೆಲ್ಲಿ ಕೂತಿದ್ದಾರೆ ಎಂದು ನುಡಿದರು.
ಯುದ್ಧ ಆರಂಭವಾಗುತ್ತೆ ಎಂದು ಯಾರಿಗೂ ಮೊದಲೇ ಗೊತ್ತಿರಲಿಲ್ಲ. ದಿಢೀರ್ ಆರಂಭವಾಗಿದ್ದರಿಂದ ಇಂತಹ ಸಮಸ್ಯೆಗಳು ಶುರುವಾಗಿವೆ. ಇಂತಹ ಕನಿಷ್ಠ ತಿಳಿವಳಿಕೆ ಸಹ ಕಾಂಗ್ರೆಸ್‍ನವರಿಗೆ ಇಲ್ಲವಾಗಿದೆ. ಅಡುಗೆ ಅನಿಲ ಸಮಸ್ಯೆಗೆ ಮುಂದಿನ ದಿನಗಳಲ್ಲಿ ಪರಿಹಾರ ಸಿಗಲಿದೆ. ಯುದ್ಧದ ಸಾಧಕ ಬಾಧಕಗಳ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಯಾವುದೇ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರಕ್ಕೆ ಇದೆ ಎಂದರು.
BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ
ಯಾವುದೇ ಹೂಡಿಕೆ ಮಾಡುವ ಅಗತ್ಯವಿಲ್ಲ ; ದಿನಕ್ಕೆ 2 ಗಂಟೆ ಹೀಗೆ ಮಾಡಿ, ತಿಂಗಳಿಗೆ 1 ಲಕ್ಷ ರೂ. ಖಚಿತ.!








