ರಾಜ್ಯದಲ್ಲಿ ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆ – Kannada News Now


India

ರಾಜ್ಯದಲ್ಲಿ ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಏರಿಕೆಯಾಗುತ್ತಿದೆ. ಇಂದು ಒಂದೇ ದಿನದಲ್ಲಿ 7,012 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ. ಆದರೆ ನೆಮ್ಮದಿಯ ವಿಷಯ ಏನೆಂದರೆ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ.

ಕೊರೋನಾ ವೈರಸ್ ನಿಂದ ರಾಜ್ಯದಲ್ಲಿ 51 ಮಂದಿ ಇಂದು ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 10,478ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ಒಂದೇ ದಿನದಲ್ಲಿ 8,344 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,45,825ಕ್ಕೆ ಏರಿಕೆಯಾಗಿದೆ. 1,09,264 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.
error: Content is protected !!