ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ : ದೆಹಲಿ ಪ್ರವಾಸ ರದ್ದು – Kannada News Now


State

ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು : ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ರದ್ದುಪಡಿಸಿದ್ದಾರೆ.

ಹೌದು, ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ಭೇಟಿಯಾಗಲು ಬಸವರಾಜ ಬೊಮ್ಮಾಯಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆ ನಾಳೆ ದೆಹಲಿಗೆ ತೆರಳಬೇಕಿತ್ತು. ಆದರೆ ಇದೀಗ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಈ ಸಂಬಂಧ ಮಾಹಿತಿ ನೀಡಿರುವ ಬಸವರಾಜ್ ಬೊಮ್ಮಾಯಿ, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.