ಬೆಂಗಳೂರು: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್ .7 ಪತ್ತೆಯಾಗಿದೆ.
ಇದರಿಂದ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಕೊರೊನಾ ಮಾರಿಯಿಂದ ಕರಾಳ ದಿನವನ್ನು ನೆನಪಿಗೆ ತರುತ್ತಿದೆ. ಮತ್ತೆ ಮರಳಿದ ಮಹಾಮಾರಿಯಿಂದ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಕೊರೊನಾ BF 7 ಉಪತಳಿ ಆಭರ್ಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಧಾನಸಭೆ ಕಲಾಪ ಮುಗಿಯುತ್ತಿದ್ದಂತೆ ಸಿಎಂ ಸಭೆ ನಡೆಸಲಿದ್ದಾರೆ.
ಇಂದು ಸಂಜೆ ಏಳು ಗಂಟೆಗೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಬಗ್ಗೆ ಚರ್ವೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮವನ್ನು ಚರ್ಚಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ.ನಗರದಲ್ಲಿ ಮಾಸ್ಕ್ , ಸ್ಯಾನಿಟೈಸರ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಕೋವಿಡ್ ಮಾರ್ಗಸೂಚಿ ರಿಲೀಸ್ ಮಾಡುವಂತೆ ಸೂಚನೆ ನೀಡಲಾಗಿದೆ. ತಜ್ಞರ ಸಲಹೆ ಮೇರೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.