ಬೆಂಗಳೂರು: ಕೊರೊನಾ ರೂಪಾಂತರಿ ಚೀನಾದಲ್ಲಿ ಅಬ್ಬರಿಸುತ್ತಾ ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕಕ್ಕೂ ಲಗ್ಗೆ ಇಡುವ ಆತಂಕ ಶುರುವಾಗಿದೆ. ಈಗಾಗಲೇ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
BIGG NEWS: ಬೆಳಗಾವಿಯಲ್ಲಿ ಸಾರಿಗೆ ನೌಕರರು ಧರಣಿ; ಪ್ರತಿಭಟನೆ ಕೈ ಬಿಡುವಂತೆ ಪೊಲೀಸರಿಂದ ಧಮ್ಕಿ ಆರೋಪ
ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬಿಎಂಟಿಸಿ ಬಸ್ ಹಾಗೂ ಮೆಟ್ರೋದಲ್ಲೂ ಸಹ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಇಂದೇ ವೇಳೆ ಮಾಸಕ್ ಇಲ್ಲವೆಂದರೆ ಪ್ರಯಾಣಿಕರಿಗೆ ಅವಕಾಶ ನೀಡುತ್ತಿಲ್ಲ. ಇದೀಗ ನಮ್ಮ ಮೆಟ್ರೋದಲ್ಲಿ ಕೊವಿಡ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರು ಮಾಸ್ಕ್ ಇಲ್ಲವೆಂದರೆ ನಮ್ಮ ಮೆಟ್ರೋದಲ್ಲಿ ಒಳಗೆ ಪ್ರವೇಶ ಮಾಡುವಂತಿಲ್ಲ ಎಂದು ಕ್ರಮ ಕೈಗೊಂಡಿದ್ದಾರೆ.
ಇನ್ನು ರೂಪ್ಸಾ ತನ್ನ ಅಧೀನದಲ್ಲಿ ಬರುವ ಕರ್ನಾಟಕದ ಖಾಸಗಿ ಶಾಲೆಗಳ ಜೊತೆ ಸಭೆ ಮಾಡಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಖಾಸಗಿ ಶಾಲೆಗಳಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ನಾಳೆಯಿಂದಲೇ ಅನ್ವಯವಾಗಲಿದೆ.