ಬೆಂಗಳೂರು: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು ಎಂಬುದಾಗಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ATMಗಳು ಅಂತ ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ ಎಂದಿದ್ದಾರೆ.
ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ.
ಕರ್ನಾಟಕದ ಜನತೆಯಲ್ಲಿ ಮೂಡಿರುವ ಈ ಅನುಮಾನ ನಿವಾರಿಸಲು, ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಸಿಎಂ ಸಿದ್ಧರಾಮಯ್. ಅವರನ್ನು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿರುವ ATM ಸರ್ಕಾರಕ್ಕೆ ನಿಗಮ ಮಂಡಳಿಗಳೇ ATM ಗಳು!
ಕರ್ನಾಟಕವನ್ನ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಟಕಾಟಕ್ ಅಂತ ಹಣ ವರ್ಗಾವಣೆ ಮಾಡುತ್ತಿರುವ @INCKarnataka
ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ATMಗಳು.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ಗಮನಿಸಿದರೆ, ರಾಜ್ಯದಲ್ಲಿರುವ ಎಲ್ಲಾ… pic.twitter.com/2ZFJ9M4TUp
— R. Ashoka (ಮೋದಿ ಅವರ ಕುಟುಂಬ) (@RAshokaBJP) June 2, 2024
BREAKING: ಗುವಾಹಟಿ ಬಳಿ ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್’ ನಿರ್ಮಾಣಕ್ಕೆ ‘ಪ್ರಧಾನಿ ಮೋದಿ’ ಅನುಮೋದನೆ