ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ( MLC Basavaraj Horatti ) ಕಾರು, ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ, ಸವಾರ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ, ಇಂದು ನಡೆದಿದೆ.
ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್ ನಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು, ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಅವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ, ಸವಾರ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಸವದತ್ತಿ ಮೂಲಕ ಜೆಸಿಬಿ ಆಪರೇಟರ್ ಕೆಂಚಪ್ಪ ಎಂಬುವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ 10 ನಿಮಿಷಗಳಿದ್ದಂತ ಬಸವರಾಜ ಹೊರಟ್ಟಿಯವರು, ಆ ಬಳಿಕ ಬೇರೊಂದು ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿದೆ.