ಬೆಂಗಳೂರು: ಬಿಎಸ್ ಯಡಿಯೂರಪ್ಪ ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ ಅವರಿಗೆ ಸಂಕಷ್ಟ ಎದುರಾಗಿದೆ.
BIGG NEWS: ಮತ್ತೊಂದು ಕೋವಿಡ್ ರೂಪಾಂತರ ಈಗ ಹರಡುತ್ತಿದೆ; ಈ ಬಗ್ಗೆ ನಿರ್ಲಕ್ಷ್ಯಿಸದಿರಿ : ಇಲ್ಲಿದೆ ಮಾಹಿತಿ
ಇದೀಗ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ಸಂಕಷ್ಟ ಉಂಟಾಗಿದೆ.
ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.