ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಯಾವುದೇ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆರ್ ಟಿ ಓ ಗಳಿಗೆ ಖಡರ್ ವಾರ್ನಿಂಗ್ ನೀಡಿದ್ದಾರೆ.
ಇಂದು ಸಾರಿಗೆ ಸಚಿವರು ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ದಿನಾಂಕ: 05-03-2025 ರಂದು ಬಿತ್ತರವಾಗಿದ್ದ ದೃಶ್ಯಾವಳಿಯಲ್ಲಿ ವಾಣಿಶ್ರೀ ಎಂ.ಎನ್ ಮೋಟಾರು ವಾಹನ ನಿರೀಕ್ಷಕರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂಬ ಸುದ್ದಿಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದರು.
ಆ ಸಂಬಂಧ ತನಿಖೆ ನಡೆಸಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಡ್ಯ ಇವರು ವಾಣಿಶ್ರೀ ಎಂ.ಎನ್. ಮೋಟಾರು ವಾಹನ ನಿರೀಕ್ಷಕರು ಇವರಿಗೆ ಕಾರಣ ಕೇಳಿ ನೋಟಿಸ್ ಅನ್ನು ಜಾರಿ ಮಾಡಿರುತ್ತಾರೆ.
ಸದರಿ ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ವಾಣಿಶ್ರೀ ಎಂ.ಎನ್ ಮೋಟಾರು ವಾಹನ ನಿರೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಮಂಡ್ಯ ಇವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿ, ಮಂಡ್ಯ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಧಾರವಾಡ (ಪಶ್ಚಿಮ) ಇಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಸ್ಥಳಾಂತರಿಸಿದ್ದಾರೆ.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಈ ತಿಂಗಳಿಂದಲೇ 15 ಕೆಜಿ ಅಕ್ಕಿ ವಿತರಣೆ