Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM

ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

19/02/2026 7:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
KARNATAKA

ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

By kannadanewsnow0909/09/2025 6:29 PM

ಬೆಳಗಾವಿ: ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಂಗಳವಾರ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ. ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. ಹಾಗೇನಾದರೂ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಸಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.

ಅಂಗನವಾಡಿಗಳು ಆರಂಭವಾಗಿ 50 ವರ್ಷವಾಗಿದೆ. ಇಲಾಖೆಗೆ ಇತಿಹಾಸವಿದೆ. ಈ ವರ್ಷ ಸುವರ್ಣ ಮಹೋತ್ಸವ ಆಚರಿಸಲು ತಯಾರಿ ನಡೆಸುತ್ತಿದ್ದೇವೆ. ಶೇ.80ರಷ್ಟು ಅಂಗನವಾಡಿಗಳು ಖಾಸಗಿ ನರ್ಸರಿಗಳಿಗಿಂತ ಚೆನ್ನಾಗಿ ನಡೆಯುತ್ತಿದೆ. ಮಕ್ಕಳಿಗೆ ಎಲ್ಲ ಸೌಲಭ್ಯ ಕೊಡುತ್ತಿದ್ದೇವೆ. ಬೀದಿ ಬೀದಿಗಳಲ್ಲಿ ಹೋಗಿ. ಪ್ರಚಾರ ಮಾಡಿ. ಸಂಖ್ಯೆ ಕಡಿಮೆಯಾಗಲು ಬಿಡಬೇಡಿ. ಪಾಲಕರ ಮನವೊಲಿಸಿ. ಮಕ್ಕಳನ್ನು ಹೆಚ್ಚು ಆಕರ್ಷಿಸಿ ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

ಅಂಗನವಾಡಿ ಕಟ್ಟಡಗಳ ಬಾಡಿಗೆ, ಮಕ್ಕಳಿಗೆ ಹಂಚುವ ಮೊಟ್ಟೆಗಳಿಗೆ ಅನುದಾನ ಕೊರತೆ ಇಲ್ಲ. ಇವುಗಳನ್ನು ವಿಳಂಬವಿಲ್ಲದೆ ಪಾವತಿಸಿ. ಪ್ರತಿ ತಿಂಗಳು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಿ. ಇಲಾಖೆಯ ಕೆಲಸಗಳು ಸುಗಮವಾಗಿ ನಡೆಯಬೇಕು. ಅಗತ್ಯ ಸುಧಾರಣೆಯಾಗಬೇಕು. ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಸಚಿವರು ಹೇಳಿದರು.

ಸಕ್ಷಮ ಯೋಜನೆಯಲ್ಲಿ ವಿಶೇಷ ಪ್ರಯತ್ನ ಮಾಡಿ ರಾಜ್ಯಕ್ಕೆ 17,500 ಅಂಗನವಾಡಿ ತರಲಾಗಿದೆ. ದೊಡ್ಡ ರಾಜ್ಯಗಳಿಗೂ ಸಿಗದಷ್ಟು ನಮಗೆ ಸಿಕ್ಕಿದೆ. ಕೇಂದ್ರ ಸರಕಾರ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಬೇರೆ ರಾಜ್ಯಗಳಿಗೆ ಮಾದರಿಯಾಗಿ ಉದಾಹರಿಸುತ್ತಿದೆ. ಹಾಗಾಗಿ ಅದಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ಜಿಲ್ಲಾಧಿಕಾರಿ ಮೊಹಮದ್‌ ರೋಷನ್‌, ಜಿಲ್ಲಾ ಪಂಚಾಯತ್‌ ಸಿಇಒ ರಾಹುಲ್‌ ಶಿಂಧೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ್‌ ಗುಡೇದ್‌, ಆಯುಕ್ತ ಗುಲಾಬರಾವ್ ಭೂಷಣ ಬೋರಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹೇಶ್‌ ಬಾಬು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್‌, ಡಿಎಸ್‌ಪಿ ನಿರಂಜನ್‌ ರಾಜೇ ಅರಸ್‌, ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರದುರ್ಗದಲ್ಲಿ ಗಣೇಶ ಮೆರವಣಿಗೆ ವೇಳೆ ಕಲರ್ ಪೇಪರ್, ಪಟಾಕಿ ಸಿಡಿಸಿದ ಆಯೋಜಕರ ವಿರುದ್ಧ FIR ದಾಖಲು

BREAKING : ನೇಪಾಳ ರಾಷ್ಟ್ರಪತಿ ‘ರಾಮಚಂದ್ರ ಪೌಡೆಲ್’ ರಾಜೀನಾಮೆ |Nepal’s President Resign

Share. Facebook Twitter LinkedIn WhatsApp Email

Related Posts

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM1 Min Read

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM2 Mins Read

ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

19/02/2026 7:37 PM1 Min Read
Recent News

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

19/02/2026 7:49 PM

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM

ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

19/02/2026 7:37 PM

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ, ಸಂಪತ್ತು, ಸಮೃದ್ಧಿ, ನೆಮ್ಮದಿ ಗ್ಯಾರಂಟಿ

19/02/2026 7:32 PM
State News
KARNATAKA

ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

By kannadanewsnow0919/02/2026 7:49 PM KARNATAKA 1 Min Read

ಶಿವಮೊಗ್ಗ : ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ತಕ್ಷಣ ಬಗೆಹರಿಸಬೇಕು. ಒಂದು ಮಾರ್ಗದ ಬಸ್ ಸಂಚಾರ ನಿಲ್ಲಿಸಿದರೆ ಅದನ್ನು…

ಮಂಡ್ಯ: ಮಾ.23ರಿಂದ ಏ.5ರವರೆಗೆ ‘ವೈರಮುಡಿ ಬ್ರಹ್ಮೋತ್ಸವ’ ಆಚರಣೆ- ಡಿಸಿ ಡಾ.ಕುಮಾರ

19/02/2026 7:40 PM

ಮಂಡ್ಯದ ಬದನೂರು ಉತ್ಸವ ಹಿನ್ನಲೆ: ನಾಳೆಯಿಂದ ಹೆಲಿ ಟೂರಿಸಂ ಆರಂಭ

19/02/2026 7:37 PM

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ, ಸಂಪತ್ತು, ಸಮೃದ್ಧಿ, ನೆಮ್ಮದಿ ಗ್ಯಾರಂಟಿ

19/02/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.