ಬೆಂಗಳೂರು : ವಿಧಾನ ಪರಿಷತ್ತಿನ ಚುನಾವಣೆ ಕುರಿತಂತೆ ಬಿಜೆಪಿ ಇಂದು ಸಭೆ ನಡೆಸಿದ್ದು, ಸಭೆಯ ಬಳಿಕ ಸುದ್ದಿಕಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಟಿಕೆಟ್ ಕೊಟ್ಟರೆ ತಪ್ಪಿಲ್ಲ ಎಂದು ತಿಳಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಚುನಾವಣಾ ತಯಾರಿ ಬಗ್ಗೆ ಸಭೆ ನಡೆಸಿದ್ದೇವೆ. ಎರಡು ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಲು ಸೂಚನೆ ನೀಡಲಾಗಿದೆ. ಪರಿಷತ್ತಿನ 11 ಸ್ಥಾನಗಳಲ್ಲಿ ಸೋತವರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚಿಸಿಲ್ಲ. ಈಗಲೇ ಸೋತವರಿಗೆ ಟಿಕೆಟ್ ಕೊಡಬೇಕು ಅಂತ ಚರ್ಚೆ ಆಗಿಲ್ಲ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಆದ್ಯತೆಯ ವಿಚಾರವಾಗಿ ಮಾತನಾಡಿದ ಅಶೋಕ್ ಟಿಕೇಟ್ ವಂಚಿತರಿಗೂ ಆದ್ಯತೆ ನೀಡಬೇಕೆಂಬ ಬಗ್ಗೆಯೂ ಚರ್ಚೆಯಾಗಿಲ್ಲ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಟಿಕೆಟ್ ಕೊಟ್ಟರೆ ತಪ್ಪಿಲ್ಲ ಎಂದು ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು.