ಬೆಂಗಳೂರು: ಬಿಜೆಪಿ ವಿಶ್ವಕರ್ಮ ಸೇರಿದಂತೆ ಹಿಂದುಳಿದ ವರ್ಗಗಳ ಸಮುದಾಯದವರಿಗೆ ಅನ್ಯಾಯ ಮಾಡಿದೆ ಎಂಬುದಾಗಿ ಕೋಪಗೊಂಡಿರುವಂತ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಅವರು, ಬಿಜೆಪಿ ಪಕ್ಷಕ್ಕೆ ಇಂದು ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆಯೂ ಬಿಜೆಪಿ ವಿಧಾನಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಮಾತುಕತೆ ನಡೆಸಿದ್ದರು. ಈ ವೇಳೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರೋದಾಗಿ ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಮಲ ತೊರೆದು, ಅಧಿಕೃತವಾಗಿ ಕೈಯನ್ನು ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಹಿಡಿಯಲಿದ್ದಾರೆ.
BIG NEWS: ಕುಡಿಯೋಕೆ ನೀರಿಲ್ಲ, ನೀರು ಕೊಡಿ ಎಂದು ಕೇಳಿದ ಯುವಕನ ಮೇಲೆ ‘ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ’ ಹಲ್ಲೆ?
2024-25ರಲ್ಲಿ ಐದು ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಯಲಿದೆ ಚಿಲ್ಲರೆ ಹಣದುಬ್ಬರ : `CMIE’ ವರದಿ