ಬೆಂಗಳೂರು: ರಾಜ್ಯ ಸರ್ಕಾರದಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಮೂಲಕ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
2024-25 ನೇ ಸಾಲಿನ ಆಯವ್ಯಯದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25 ನೇ ಸಾಲಿನಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು ಎಂದು ಘೋಷಿಸಲಾಗಿರುತ್ತದೆ ಹಾಗೂ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ದಿನಾಂಕ:25.06.2024 ರಂದು ಆದೇಶವನ್ನು ಹೊರಡಿಸಲಾಗಿದೆ. ಈ ಸಂಬಂಧ ತಂತ್ರಾಂಶ ಅಭಿವೃದ್ಧಿಪಡಿಸಿ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿ ಆರೋಹಿಸಲಾಗಿರುತ್ತದೆ.
ಉಲ್ಲೇಖ (2) ಮತ್ತು (3) ರನ್ವಯ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವಾ ವಿವರಗಳ ದತ್ತಾಂಶವನ್ನು ದಿನಾಂಕ: 14.08.2024 ಮತ್ತು 26.08.2024 ರ ಒಳಗೆ ಪರಿಶೀಲಿಸಿ ಅನುಮೋದನೆ ನೀಡಲು ತಿಳಿಸಲಾಗಿರುತ್ತದೆ. ಪುಸ್ತುತ 2025-26 ನೇ ಸಾಲಿನ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಬೇಕಾಗಿರುವುದರಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಇತ್ತೀಚಿನ ಸೇವಾ ವಿವರ ಅವಶ್ಯಕತೆ ಇರುವುದರಿಂದ https://rdprtransfer.karnataka.gov.in ವೆಬ್‌ಸೈಟ್‌ನಲ್ಲಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸೇವಾ ವಿವರಗಳ ದತ್ತಾಂಶವನ್ನು ಕೆಳಕಂಡಂತೆ ನಿಗದಿಪಡಿಸಿರುವ ಅವಧಿಯೊಳಗೆ ಪರಿಶೀಲಿಸಿ, ಅನುಮೋದನೆ ನೀಡಲು ತಿಳಿಸಿದ್ದಾರೆ.
- ಎಲ್ಲಾ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ರವರು https://rdprtransfer.karnataka.gov.in ವೆಬ್‌ಸೈಟ್‌ನಲ್ಲಿರುವ ದತ್ತಾಂಶ ಪರಿಶೀಲನೆ ಪೂರ್ಣಗೊಳಿಸಲು ಕೊನೆಯ ದಿನಾಂಕ 10-03-2025 ಆಗಿರುತ್ತದೆ.
- ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಸದರಿ ವೆಬ್‌ಸೈಟ್‌ನಲ್ಲಿ ಇಂದೀಕರಿಸಲಾಗಿರುವ ತಮ್ಮ ಸೇವಾ ವಿವರವನ್ನು ಪರಿಶೀಲಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ 13-03-2025.
- ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳು ಸ್ವೀಕರಿಸಲಾದ ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಳಿಸಲು ಕೊನೆಯ ದಿನಾಂಕ 15-03-2025 ಆಗಿರುತ್ತದೆ.
- ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವೆಬ್‌ಸೈಟ್‌ನಲ್ಲಿನ ದತ್ತಾಂಶವನ್ನು ಅನುಮೋದಿಸಿ, ಪೂರ್ಣಗೊಳಿಸಲು ಕೊನೆಯ ದಿನಾಂಕ 19-03-2025 ಆಗಿರುತ್ತದೆ.