ಬೆಂಗಳೂರು: ಎಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶಾತಿ ಕಲ್ಪಿಸುವ ಭಾಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( Karnataka Examination Authority -KEA ) ಮತ್ತು ಕಾಮೆಡ್-ಕೆ ( Comed-K ) ಯಾವಾಗ ಕೌನ್ಸೆಲಿಂಗ್ ಪ್ರಾರಂಭಿಸಬೇಕು ಎನ್ನುವುದನ್ನು ನಿರ್ಧರಿಸಲು ಖಾಸಗಿ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘದ (ಕ್ಯುಪೇಕಾ) ಜತೆ ಸೆ.13ರಂದು ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ( Minister DR CN Ashwathnarayana ) ಹೇಳಿದ್ದಾರೆ.
ಕ್ಯುಪೇಕಾ ಪ್ರತಿನಿಧಿಗಳ ಜತೆ ಬುಧವಾರ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಅವರು ಈ ವಿಚಾರ ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕಾಮೆಡ್-ಕೆ ಪರಸ್ಪರ ಸಮಾಲೋಚಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ರೂಪಿಸಲಿವೆ ಎಂದು ಅವರು ಹೇಳಿದರು.
ಸಭೆಯಲ್ಲಿ ಸರಕಾರದ ಪರವಾಗಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ, ಕ್ಯುಪೇಕಾ ಪರವಾಗಿ ಎಂ ಆರ್ ಜಯರಾಂ, ಶಾಮ್ ಮತ್ತು ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘದ ಅಧ್ಯಕ್ಷ ಶಫಿ ಅಹಮದ್ ಉಪಸ್ಥಿತರಿದ್ದರು.
BIG NEWS: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ