Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಂದೇ ರಾತ್ರಿಯಲ್ಲಿ ಡಜನ್ ಭೂಕಂಪನ : ಸಿಕ್ಕಿಂ, ಉತ್ತರ ಬಂಗಾಳದಲ್ಲಿ ಭೀತಿ

08/02/2026 11:41 AM

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

08/02/2026 11:33 AM

BREAKING: ಮದುವೆ ಮನೆಯಲ್ಲಿ ಸೂತಕದ ಛಾಯೆ: ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಭೀಕರ ಅಪಘಾತಕ್ಕೆ ಬಲಿ!

08/02/2026 11:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ: ಸಚಿವ ಎಂ.ಬಿ ಪಾಟೀಲ್
KARNATAKA

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ, ಸಕಲ ಸಿದ್ಧತೆ: ಸಚಿವ ಎಂ.ಬಿ ಪಾಟೀಲ್

By kannadanewsnow0903/02/2025 4:40 PM

ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ.

ಸಮಾವೇಶದ ಸಿದ್ಧತೆ ಮತ್ತು ನಾನಾ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಉಪಸ್ಥಿತರಿದ್ದರು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು.

ಈಗಾಗಲೇ 2,000ಕ್ಕೂ ಹೆಚ್ಚು ಹೂಡಿಕೆದಾರರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿ, ನೋಂದಾಯಿಸಿಕೊಂಡಿದ್ದಾರೆ. ಸಮಾವೇಶದಲ್ಲಿ 18 ದೇಶಗಳು ಪಾಲ್ಗೊಳ್ಳುತ್ತಿದ್ದು, ಈ ಪೈಕಿ 9 ದೇಶಗಳು ಪ್ರತ್ಯೇಕ ಪೆವಿಲಿಯನ್ ಹೊಂದಿರಲಿವೆ. ಈ ಸಂದರ್ಭದಲ್ಲಿ 60ಕ್ಕೂ ಹೆಚ್ಚು ಉದ್ಯಮ ಪರಿಣತರು ಗೋಷ್ಠಿಗಳಲ್ಲಿ ಮಾತನಾಡಲಿದ್ದಾರೆ. ಜೊತೆಗೆ ಸರಕಾರವು ರಾಜ್ಯದಲ್ಲಿ ಹೂಡಿಕೆಗೆ ಇರುವ ಪ್ರಶಸ್ತ ಅವಕಾಶಗಳನ್ನು ಮತ್ತು ನಮ್ಮಲ್ಲಿರುವ ಉದ್ಯಮಸ್ನೇಹಿ ನೀತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು ಹೂಡಿಕೆದಾರರಿಗೆ ಮನವರಿಕೆ ಮಾಡಿಕೊಡಲಿದೆ ಎಂದು ಅವರು ಹೇಳಿದ್ದಾರೆ.

ಈ ಸಮಾವೇಶಕ್ಕೆ ಎಂ ಬಿ ಪಾಟೀಲರು ಕಳೆದ ಕೆಲವು ತಿಂಗಳುಗಳಿಂದಲೇ ಶ್ರಮಿಸುತ್ತಿದ್ದಾರೆ. ಇದರ ಭಾಗವಾಗಿ ಅಮೆರಿಕ, ಯೂರೋಪ್, ದಕ್ಷಿಣ ಕೊರಿಯಾ, ಜಪಾನ್ ದೇಶಗಳಲ್ಲಿ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿ ರೋಡ್-ಶೋ ಮತ್ತು ಹೂಡಿಕೆದಾರರ ಜೊತೆ ಮಾತುಕತೆಗಳನ್ನು ನಡೆಸಿದ್ದಾರೆ. ಸಮಾವೇಶದಲ್ಲಿ ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ಇನ್ನೂ ಹಲವು ನೀತಿಗಳನ್ನು ಅನಾವರಣಗೊಳಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

’ಪ್ರಗತಿಯ ಮರುಕಲ್ಪನೆ’ಯ ಥೀಮ್

ಜಾಗತಿಕ ಹೂಡಿಕೆದಾರರ ಸಮಾವೇಶವು `ಪ್ರಗತಿಯ ಮರುಕಲ್ಪನೆ’ ಎನ್ನುವ ಪ್ರಧಾನ ಥೀಮ್ ಒಳಗೊಂಡಿದ್ದು, ತಂತ್ರಜ್ಞಾನ-ಚಾಲಿತ, ಪರಿಸರಸ್ನೇಹಿ, ಒಳಗೊಳ್ಳುವಿಕೆ ಮತ್ತು ಕ್ಷಮತೆ (Tech-driven, Green, Inclusive & Resilient) ಎನ್ನುವ ನಾಲ್ಕು ಉಪಆಶಯಗಳನ್ನು ಹೊಂದಿದೆ. ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿನ ಕೆಲವು ಅತ್ಯುತ್ತಮ ಅಂಶಗಳನ್ನೂ ಇಲ್ಲಿ ಅಳವಡಿಸಿಕೊಂಡಿದ್ದೇವೆ. ಅಂಕಿತ ಹಾಕುವ ಒಡಂಬಡಿಕೆಗಳ ಪೈಕಿ ಶೇಕಡ 70-80ರಷ್ಟಾದರೂ ನಿಜವಾದ ಹೂಡಿಕೆಯಾಗಿ ಪರಿವರ್ತನೆಯಾಗಬೇಕು ಎನ್ನುವುದು ಸರಕಾರದ ಗುರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸಮಾವೇಶದಲ್ಲಿ ರಫ್ತಿಗೆ ಉತ್ತೇಜನ ನೀಡುವಂತಹ, 2025-30ರವರೆಗಿನ ಐದು ವರ್ಷಗಳ ನೂತನ ಕೈಗಾರಿಕಾ ನೀತಿಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದರಲ್ಲಿ ಡಾ.ಡಿ ಎಂ ನಂಜುಂಡಪ್ಪ ವರದಿಯಲ್ಲಿ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಸುಲಲಿತ ವಹಿವಾಟು ಸಂಸ್ಕೃತಿ ಮತ್ತು ಏಕಗವಾಕ್ಷಿ ವ್ಯವಸ್ಥೆಗೆ ಕೂಡ ಚಾಲನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಬಹುತೇಕ ಜಾಗತಿಕ ಮಟ್ಟದ ಕಂಪನಿಗಳೆಲ್ಲವೂ ಬೆಂಗಳೂರಿನಲ್ಲಿ ಆರ್ & ಡಿ ಕೇಂದ್ರಗಳನ್ನು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿವೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲೇ ಉತ್ಪಾದನೆಯೂ ಆಗುವಂತೆ ನೋಡಿಕೊಳ್ಳಲು ಸರಕಾರ ಉಪಕ್ರಮಗಳನ್ನು ತೆಗೆದುಕೊಳ್ಳಲಿದೆ. ಪರಿಸರಸ್ನೇಹಿ ಇಂಧನ ಮತ್ತು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆಗೂ ಗಮನಹರಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಮೊದಲು ಕರ್ನಾಟಕ, ಮಹಾರಾಷ್ಟ್ರ, ಗುಜರಾತಿನಂತಹ ಕೆಲವೇ ರಾಜ್ಯಗಳು ಮಾತ್ರ ಹೂಡಿಕೆದಾರರ ಸಮಾವೇಶ ನಡೆಸುತ್ತಿದ್ದವು. ಈಗ ಹೆಚ್ಚಿನ ರಾಜ್ಯಗಳು ಇಂಥ ಸಮಾವೇಶ ಹಮ್ಮಿಕೊಳ್ಳುತ್ತಿವೆ. ಈ ಸಲದ ಸಮಾವೇಶದಲ್ಲಿ ಕುಮಾರ್ ಬಿರ್ಲಾ, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಸೇರಿದಂತೆ ಖ್ಯಾತ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ಫೆ.12 ಮತ್ತು 13ರಂದು ಇಡೀ ಎರಡು ದಿನ ಸಮಾವೇಶದಲ್ಲಿ ಅತ್ಯಂತ ಗಂಭೀರ ಚಟುವಟಿಕೆಗಳು ನಡೆಯಲಿವೆ. ಹೀಗಾಗಿ 11ರಂದು ಸಂಜೆ 4 ಗಂಟೆಗೇ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ ಮತ್ತು ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇತರ ಎಲ್ಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಈ ವರ್ಷ SSLC ವಿದ್ಯಾರ್ಥಿಗಳಿಗೆ ಶೇ.10% ಗ್ರೇಸ್ ಅಂಕ ಇಲ್ಲ: ಸಚಿವ ಮಧು ಬಂಗಾರಪ್ಪ | Karnataka SSLC Exam 2025

BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT’ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

Share. Facebook Twitter LinkedIn WhatsApp Email

Related Posts

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

08/02/2026 11:33 AM2 Mins Read

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

08/02/2026 11:19 AM2 Mins Read

BIG UPDATE : ಬಳ್ಳಾರಿಯಲ್ಲಿ 5 ಸಾವಿರ ವರ್ಷದ ಹಳೆಯ 2 ಮಾನವ ಅಸ್ಥಿಪಂಜರ ಪತ್ತೆ : ಉತ್ಖನನ ವೇಳೆ ಬಯಲಾಯ್ತು ಅಚ್ಚರಿ ಸಂಗತಿ.!

08/02/2026 11:13 AM1 Min Read
Recent News

ಒಂದೇ ರಾತ್ರಿಯಲ್ಲಿ ಡಜನ್ ಭೂಕಂಪನ : ಸಿಕ್ಕಿಂ, ಉತ್ತರ ಬಂಗಾಳದಲ್ಲಿ ಭೀತಿ

08/02/2026 11:41 AM

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

08/02/2026 11:33 AM

BREAKING: ಮದುವೆ ಮನೆಯಲ್ಲಿ ಸೂತಕದ ಛಾಯೆ: ಲಗ್ನಪತ್ರಿಕೆ ಹಂಚಲು ಹೋದ ತಂದೆ-ಮಗ ಭೀಕರ ಅಪಘಾತಕ್ಕೆ ಬಲಿ!

08/02/2026 11:25 AM

ಟಿ20 ವಿಶ್ವಕಪ್ 2026 ಪಂದ್ಯಗಳ ನೇರಪ್ರಸಾರ ವೀಕ್ಷಿಸುವುದು ಹೇಗೆ? ಸ್ವರೂಪ, ತಂಡಗಳು, ಗುಂಪುಗಳು ಮತ್ತು ಬಹುಮಾನದ ವಿವರಗಳು ಇಲ್ಲಿವೆ.

08/02/2026 11:24 AM
State News
KARNATAKA

ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಸೀಟು : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್.!

By kannadanewsnow5708/02/2026 11:33 AM KARNATAKA 2 Mins Read

ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್, ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿ ಖಾಸಗಿ ಶಾಲೆಗಳಲ್ಲಿ…

ಗಮನಿಸಿ : `ದಿಶಾಂಕ್ ಆ್ಯಪ್’ ಮೂಲಕ ಮನೆಯಲ್ಲೇ ಕುಳಿತು ಜಮೀನಿನ ಅಸಲಿ ಮಾಹಿತಿ ಹೀಗೆ ಚೆಕ್ ಮಾಡಿ.!

08/02/2026 11:19 AM

BIG UPDATE : ಬಳ್ಳಾರಿಯಲ್ಲಿ 5 ಸಾವಿರ ವರ್ಷದ ಹಳೆಯ 2 ಮಾನವ ಅಸ್ಥಿಪಂಜರ ಪತ್ತೆ : ಉತ್ಖನನ ವೇಳೆ ಬಯಲಾಯ್ತು ಅಚ್ಚರಿ ಸಂಗತಿ.!

08/02/2026 11:13 AM

ಗಮನಿಸಿ : ಬರಿ ವಂಶವೃಕ್ಷವಿದ್ದರೆ ಸಾಲದು `ಪಿತ್ರಾರ್ಜಿತ ಆಸ್ತಿ’ ಪಡೆಯಲು 5 ಪ್ರಮುಖ ದಾಖಲೆಗಳು ಕಡ್ಡಾಯ.!

08/02/2026 11:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.