ನವದೆಹಲಿ: ʻಆರ್ಥಿಕ ಸುಧಾರಣೆಗಳಿಗಾಗಿ ದೇಶವು ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್(Manmohan Singh) ಅವರಿಗೆ ಋಣಿಯಾಗಿದೆʼ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಮಂಗಳವಾರ ಹೇಳಿದ್ದಾರೆ.
ಮಂಗಳವಾರ ನಡೆದ ಟಿಐಒಎಲ್ ಅವಾರ್ಡ್ಸ್ 2022 ಈವೆಂಟ್ನಲ್ಲಿ ಮಾತನಾಡಿದ ಗಡ್ಕರಿ, 1991 ರಲ್ಲಿ ವಿತ್ತ ಸಚಿವರಾಗಿದ್ದ ಮನ್ಮೋಹನ್ ಸಿಂಗ್ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನು ನೀಡಿತು ಮತ್ತು ಅದು ಉದಾರ ಆರ್ಥಿಕತೆಗೆ ನಾಂದಿ ಹಾಡಿತು. ಈ ಎಲ್ಲಾ ಕಾರಣಕ್ಕೆ ದೇಶವು ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆʼ ಎಂದು ಹೇಳಿದ್ದಾರೆ.
ಭಾರತಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ. ಅದು ಬಡವರಿಗೆ ಪ್ರಯೋಜನವನ್ನು ನೀಡುತ್ತದೆ. ಉದಾರ ಆರ್ಥಿಕ ನೀತಿ ರೈತರು ಮತ್ತು ಬಡವರಿಗಾಗಿದೆ. ಉದಾರ ಆರ್ಥಿಕ ನೀತಿಯ ಮೂಲಕ ದೇಶವನ್ನು ಅಭಿವೃದ್ಧಿಪಡಿಸುವಲ್ಲಿ ಚೀನಾ ಉತ್ತಮ ಉದಾಹರಣೆಯಾಗಿದೆ. ಭಾರತದ ಸಂದರ್ಭದಲ್ಲಿ, ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ದೇಶಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆಯ ಅಗತ್ಯವಿದೆ ಎಂದು ಗಡ್ಕರಿ ಹೇಳಿದರು.