Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಗುವಿನ ಪೌಷ್ಟಿಕಾಂಶ ಮತ್ತು ಭಾವನಾತ್ಮಕ ಅಗತ್ಯಕ್ಕೆ ತಾಯಿಯೇ ಆಸರೆ; ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

ಬೀಜಿಂಗ್‌ನಲ್ಲಿ ಟ್ರಂಪ್-ಕ್ಸಿ ಜಿನ್‌ಪಿಂಗ್ ಐತಿಹಾಸಿಕ ಭೇಟಿ: ವ್ಯಾಪಾರ ಸಮರ ಮತ್ತು ಇರಾನ್ ಯುದ್ಧದ ಕುರಿತು ಮಹತ್ವದ ಚರ್ಚೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ.

ಇಂಡಿಯನ್ ಅಕಾಡೆಮಿ ಆಫ್ ಇನ್ ಸ್ಟಿಟ್ಯೂಷನ್ಸ್ (ಐಎಜಿಐ) ಇಂಡಿಯನ್ ಅಕಾಡೆಮಿ ಡಿಗ್ರಿ ಕಾಲೇಜು (ಸ್ವಾಯತ್ತ) ಬುಧವಾರ ಆಯೋಜಿಸಿದ್ದ 13 ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಸಚಿವರು, “ದೇಶದ ಪ್ರಗತಿಗೆ ಯುವಶಕ್ತಿಯೇ ಚಾಲಕ ಶಕ್ತಿಯಾಗಿದೆ,” ಎಂದು ತಿಳಿಸಿದರು.

“ವಿದ್ಯಾರ್ಥಿಗಳು ಕನಸುಗಳನ್ನು ಕಾಣಬೇಕು. ಶಿಕ್ಷಣದಿಂದ ಆ ಕನಸುಗಳಿಗೆ ಜೀವ ಬರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಹಾಗೂ ಗುರಿಯಿದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ನಮ್ಮ ದೇಶದಲ್ಲಿ ಜನಸಂಖ್ಯೆ ಹೊರೆ ಎಂದಿದ್ದರು. ಆದರೆ ರಾಜೀವ್ ಗಾಂಧಿಯಂಥ ನಾಯಕರು ಜನಸಂಖ್ಯೆಯನ್ನು ಮಾನವ ಸಂಪನ್ಮೂಲ ಎಂದು ವಿಶ್ಲೇಷಿಸಿ ಕೌಶಲ್ಯ ಒದಗಿಸಿ ದೇಶ ಕಟ್ಟಿದರು,” ಎಂದರು.

“ನಮ್ಮ ದೇಶದ ಯುವಶಕ್ತಿ ಮನಸ್ಸು ಮಾಡಿದರೆ ಮುಂದಿನ 5-10 ವರ್ಷಗಳಲ್ಲಿ ಭ್ರಷ್ಟಾಚಾರ ಕೊನೆಗೊಳ್ಳಲಿದೆ. ರಾಜಕಾರಣ ಎಲ್ಲದಕ್ಕೂ ಕೇಂದ್ರಬಿಂದುವಾಗಿದೆ. ಯುವಜನತೆ ಜಾತಿ, ಮತ-ಪಂಥಗಳನ್ಜು ಬದಿಗಿಟ್ಟು, ಪ್ರತಿಯೊಬ್ಬ ನಾಗರಿಕರಿಗೂ ಘನತೆಯ ಬದುಕು ನೀಡಲು ಮನಸ್ಸು ಮಾಡಿ ರಾಜಕಾರಣಕ್ಕೆ ಬರಬೇಕಿದೆ. ನಾನು ಕೂಡ ಕೊಡಗಿನಲ್ಲಿ ಯಾವುದೇ ಹಿನ್ನಲೆ ಇಲ್ಲದಿದ್ದರೂ ಸ್ವಯಂ ಆಸಕ್ತಿಯಿಂದಲೇ ರಾಜಕಾರಣ ಆಯ್ಕೆಮಾಡಿಕೊಂಡು ಇಲ್ಲಿಯವರೆಗೂ ಬಂದಿದ್ದೇನೆ,” ಎಂದು ತಿಳಿಸಿದರು.

“ನಮ್ಮ ಸರ್ಕಾರದ ಆರ್ಥಿಕ ನೀತಿ ಹಾಗೂ ಜನಪರ ಬದ್ದತೆಯ ಪ್ರತೀಕವಾಗಿ ನಾವು ಘೋಷಿಸಿದ ಗ್ಯಾರಂಟಿ ಯೋಜನೆಗಳು ಇಂದು ಕರ್ನಾಟಕವನ್ನು ದೇಶದಲ್ಲೇ ಪ್ರಗತಿದಾಯಕ ರಾಜ್ಯವಾಗಿಸಿದೆ. ತಲಾ ಆದಾಯದಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ. ಮನೆಯೊಡತಿ ಮಹಿಳೆಯರಿಗೆ ಆರ್ಥಿಕ ಬಲ ನೀಡಿದ್ದು ನಮ್ಮ ಯೋಜನೆ. ಇವೆಲ್ಲವೂ ಸಾಧ್ಯವಾಗಿದ್ದು ಜನಪರ ಬದ್ದತೆಯ ಕಾರಣಕ್ಕಾಗಿಯೇ. ನಾವೇನು ಮತದಾರರಿಗೆ ಆಮಿಷ ನೀಡಿಲ್ಲ, ನೀಡುವುದೂ ಇಲ್ಲ. ನಾನು ದೇವರನ್ನು ನಂಬುತ್ತೇನೆ. ಎಲ್ಲರ ದೇವರು ಒಂದೇ. ದೇವರನ್ನು ನಂಬಿದವರು ಯಾವುದೇ ಕೆಟ್ಟ ಕೆಲಸಗಳಲ್ಲಿ ತೊಡಗುವುದಿಲ್ಲ ಎಂಬುದು ನನ್ನ ಅಭಿಪ್ರಾಯ,” ಎಂದರು.

ಶಿಕ್ಷಣ ತಜ್ಞ ಹಾಗೂ ಇಂಡಿಯನ್ ಅಕಾಡೆಮಿ ಆಫ್ ಇನ್ ಸ್ಟಿಟ್ಯೂಷನ್ಸ್ (ಐಎಜಿಐ) ಅಧ್ಯಕ್ಷ ಡಾ. ಸೋಮಶೇಖರ್ ಮಾತನಾಡಿ “ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ಸ್ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ನಾಡಿನ, ದೇಶದ ಗಣ್ಯರು, ಸಾಧಕರ ಹೆಸರಿನಲ್ಲಿ ವಿದ್ಯಾರ್ಥಿ ವೇತನ ನೀಡುತ್ತಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಹಸ್ತ ಚಾಚಿ ಉನ್ನತ ಶಿಕ್ಷಣದ ಕನಸುಗಳಿಗೆ ರೆಕ್ಕೆ ಕಟ್ಟಿಕೊಡುತ್ತಿದೆ,” ಎಂದು ಹೇಳಿದರು.

“ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಶಾಸಕರ ಶಿಕ್ಷಣದ ಮೇಲಿನ ಪ್ರೀತಿ ನಮ್ಮ ಸಂಸ್ಥೆಯನ್ನು ಪೋಷಿಸಿದೆ. ಸಂಸ್ಥೆಯನ್ನು ಕಲ್ಯಾಣನಗರದಲ್ಲಿ ಆರಂಭಿಸಿ, ವಿದ್ಯಾರ್ಥಿ ವೇತನ ಘೋಷಿಸಿದಾಗ ಕೆ.ಜೆ.ಜಾರ್ಜ್ ಅವರೇ 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದರು. ಈಗ ವಿದ್ಯಾರ್ಥಿಗಳ ಸಂಖ್ಯೆ 60 ಕ್ಕೆ ಏರಿಕೆಯಾಗಿದ್ದು, ಇನ್ನು ಹೆಚ್ಚಾಗಲಿದೆ,” ಎಂದರು.

ಇಂಡಿಯನ್ ಅಕಾಡೆಮಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಭಾರತಿ ಸೋಮಶೇಖರ್ ಹಾಗೂ ಕಾಲೇಜು ಪ್ರಾಂಶುಪಾಲರಾದ ಡಾ. ಭಾರತಿ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಬೋದಕ ವರ್ಗ ಹಾಗೂ ಪೋಷಕರು ಪಾಲ್ಗೊಂಡಿದ್ದರು.

****

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

2 Mins Read
Recent News

​ಮಗುವಿನ ಪೌಷ್ಟಿಕಾಂಶ ಮತ್ತು ಭಾವನಾತ್ಮಕ ಅಗತ್ಯಕ್ಕೆ ತಾಯಿಯೇ ಆಸರೆ; ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

ಬೀಜಿಂಗ್‌ನಲ್ಲಿ ಟ್ರಂಪ್-ಕ್ಸಿ ಜಿನ್‌ಪಿಂಗ್ ಐತಿಹಾಸಿಕ ಭೇಟಿ: ವ್ಯಾಪಾರ ಸಮರ ಮತ್ತು ಇರಾನ್ ಯುದ್ಧದ ಕುರಿತು ಮಹತ್ವದ ಚರ್ಚೆ!

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.