ಬೆಂಗಳೂರು: ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ( Sampigehalli Police Station ) ಪೊಲೀಸರಿಬ್ಬರು ದಂಪತಿಗಳನ್ನು ತಡೆದು, ಹಣಕ್ಕಾಗಿ ಪೀಡಿಸಿದ್ದಲ್ಲದೇ, ಆನ್ ಲೈನ್ ( Online Payment ) ಮೂಲಕ 1 ಸಾವಿರ ಹಣವನ್ನು ಸುಖಾ ಸುಮ್ಮನೆ ದೋಚಿದ್ದರು. ಈ ಘಟನೆಯಿಂದಾಗಿ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತೆ ಆಗಿತ್ತು. ಹೀಗಾಗಿ ಇಂತಹ ಅನುಚಿತ ವರ್ತನೆಯನ್ನು ನಾವು ಸಹಿಸುವುದಿಲ್ಲ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ( Bangalore City Police Commissioner ) ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿದ್ದು, ದಂಪತಿಗಳನ್ನು ದರೋಡೆ ಮಾಡಿದಂತ ಸಂಪಿಗೆಹಳ್ಳಿಯ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿರುವುದಾಗಿ ಹೇಳಿದ್ದಾರೆ.
Two police personnel from @sampigehallips responsible for the incident have been identified, suspended and departmental action initiated. @BlrCityPolice will not tolerate deviant behaviour from its staff. @DCPNEBCP @Karthik_Patri
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) December 11, 2022
ಈ ಘಟನೆಗೆ ಕಾರಣರಾದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳನ್ನು ಗುರ್ತಿಸಿ ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣಾ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ತನ್ನ ಸಿಬ್ಬಂದಿಗಳಿಂದ ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಘಟನೆಗೆ ಕಾರಣರಾದ @ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳನ್ನು ಗುರ್ತಿಸಿ ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣಾ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
@BlrCityPolice ತನ್ನ ಸಿಬ್ಬಂದಿಗಳಿಂದ ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ. https://t.co/a6Zw2PU8Ya— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) December 11, 2022