ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯರಪ್ಪ ಅವರಿಗೆ ಮತ್ತೆ ತಾತ್ಕಾಲಿಕ ರಿಲೀಫ್ ಅನ್ನು ಕೋರ್ಟ್ ನೀಡಿದೆ. ಇಂದು ಅವರ ವಿರುದ್ಧದ ಪೋಸ್ಕೋ ಕೇಸ್ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.19ಕ್ಕೆ ಹೈಕೋರ್ಟ್ ಮುಂದೂಡಿದೆ.
ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ವಕೀಲ ಅಶೋಕ್ ನಾಯಕ್ ಅವರು ಸೆ.3ರಂದು ಪ್ರೊ.ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು.
ಇನ್ನೂ ಪೋಕ್ಸೋ ಕೇಸ್ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕ ಸದಸ್ಯ ಪೀಠವು ವಿಚಾರಣೆಯನ್ನು ಮುಂದೂಡಿದೆ.
ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ ಪ್ರಕರಣ ರದ್ದು ಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಂದಿನ ವಿಚಾರಣೆಯನ್ನು ಮುಂದೂಡಿ ಆದೇಶಿಸಿದೆ.
ಅಂದಹಾಗೇ ಮಾ.14ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಸಹಾಯ ಕೋರಿ ಮನೆಗೆ ಬಂದಂತ ಮಹಿಳೆಯ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.
BREAKING : ನಟ ದರ್ಶನ್ ಗೆ ಸದ್ಯಕ್ಕಿಲ್ಲ ರಿಲೀಫ್ : 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ
ರೈತರ ಗಮನಕ್ಕೆ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ