ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗಿರುವಂತ ನಟ ದರ್ಶನ್ ಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಫೆಬ್ರವರಿ 20ರವರೆಗೆ ಮೈಸೂರಿನಲ್ಲಿ ಇರಲು ಅನುಮತಿ ನೀಡಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿ ಜಾಮೀನು ಪಡೆದು ನಟ ದರ್ಶನ್ ಬಿಡುಗಡೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿರುವಂತ ಅವರು ವೈದ್ಯರನ್ನು ಭೇಟಿಯಾಗುವ ಸಂಬಂಧ ಮೈಸೂರಿಗೆ ತೆರಳಬೇಕಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯವು ಫೆಬ್ರವರಿ 20ರವರೆಗೆ ಮೈಸೂರಿಗೆ ತೆರಳಲು, ವೈದ್ಯರನ್ನು ಭೇಟಿಯಾಗಲು ಅನುಮತಿ ನೀಡಿದೆ. ಈ ಮೂಲಕ ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ `ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ.!
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಫೆ.20ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು