ಬೆಂಗಳೂರು: ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದರು. ಈ ನಡುವೆ ಈಗ ಕೋರ್ಟ್ ಅವರಿಗೆ ಬಿಗ್ ಶಾಕ್ ನೀಡಿದೆ. ಜೆಡಿಎಸ್ ಪಾರ್ಟಿ ಚಿಹ್ನೆ, ಲೆಟರ್‌ಹೆಡ್ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ ನೀಡಿದೆ.
ಸಿಟಿ ಸಿವಿಲ್ ಕೋರ್ಟ್ ಈ ಆದೇಶವನ್ನು ಹೊರಡಿಸಿದೆ. ತಮ್ಮನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ತಡೆಯುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗುವುದಾಗಿ ಮತ್ತು ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಇಬ್ರಾಹಿಂ ಕೆಲ ದಿನಗಳ ಹಿಂದೆ ಹೇಳಿದ್ದರು.