ಬೆಂಗಳೂರು: ಅಶ್ಲೀಲ ಪ್ರಕರಣ, ಅತ್ಯಾಚಾರ ಕೇಸ್, ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಅವರು ಇಂದು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅತ್ಯಾಚಾರ ಆರೋಪಿಗೆ ಬಿಗ್ ಶಾಕ್ ನೀಡಿದೆ.
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಅವರನ್ನು, ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ. ಅಲ್ಲದೇ ಪ್ರಕರಣ ಸಂಬಂಧ ಸ್ಥಳಮಹಜರ್ ಕೂಡ ನಡೆಸಲಾಗುತ್ತಿದೆ.
ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯ ಬಳಿಕ ವಜಾಗೊಳಿಸಿದ್ದಾರೆ. ಹೀಗಾಗಿ ಎಸ್ಐಟಿ ವಶದಲ್ಲಿರುವಂತ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಎನ್ನುವಂತೆ ಆಗಿದೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ
ಶಾಸಕ ಹರೀಶ್ ಗೌಡಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‍ಮೇಲ್ ಮಾಡಿದ ಇಬ್ಬರು ಆರೋಪಿಗಳು ಅರೆಸ್ಟ್