ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ( POSCO Case ) ಬಂಧನಕ್ಕೆ ಒಳಗಾಗಿರುವಂತ ಮುರುಘಾ ಶ್ರೀಗಳು ( Murugha Sri ) ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಈ ಬೆನ್ನಲ್ಲೇ ಇಂದು ಅವರ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಮುರುಘಾ ಶ್ರೀಗಳಿಗೆ ಮತ್ತೆ ಬಿಗ್ ಶಾಕ್ ನೀಡಲಾಗಿದೆ.
BIGG NEWS : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ : ದಿವ್ಯಾ ಹಾಗರಗಿಯ ಪತಿ ರಾಜೇಶ್ಗೆ ಜಾಮೀನು ಮಂಜೂರು
ಇಂದು ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣದ ನ್ಯಾಯಾಂಗ ಬಂಧನದ ಅವಧಿ ಕೊನೆಗೊಳ್ಳುತ್ತಿತ್ತು. ಈ ಹಿನ್ನಲೆಯಲ್ಲಿ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಕುರಿತಂತ ಅರ್ಜಿಯನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿಯಿತು.
ಪಿ.ಎಫ್.ಐ ಕಾರ್ಯಕರ್ತರ ಮೇಲೆ ದಾಳಿ ಪ್ರಕರಣ: ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ – ಸಿಎಂ ಬೊಮ್ಮಾಯಿ
ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಪೀಠವು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪದಲ್ಲಿ ಎ.1 ಆರೋಪಿಯಾಗಿರುವಂತ ಮುರುಘಾ ಶ್ರೀಗಳು ಹಾಗೂ ಎ2 ಆರೋಪಿಯಾದಂತ ಲೇಡಿ ವಾರ್ಡನ್ ಗಳಿಗೆ ಅಕ್ಟೋಬರ್ 10ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಮತ್ತೆ ಮುರುಘಾ ಶ್ರೀಗಳಿಗೆ ಬಿಗ್ ಶಾಕ್ ನೀಡಲಾಗಿದೆ.