ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಇಂದು ಪೊಲೀಸ್ ಕಸ್ಟಡಿಗೆ ಕೋರ್ಟ್ ನೀಡಿದ್ದರೇ, ಎ1 ಆರೋಪಿ ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ನಟ ದರ್ಶನ್ ಬಗ್ಗೆ ಯಾವುದೇ ಅವಹೇಳನಕಾರಿ ಸುದ್ದಿಯನ್ನು ಪ್ರಕಟಿಸದಂತೆ ಕೋರ್ಟ್ ನಿರ್ಬಂಧ ವಿಧಿಸಿದೆ.
ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಕಾರಣಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್ ತೀವ್ರವಾಗಿ ಹಲ್ಲೆ ನಡೆಸಿ, ಹತ್ಯೆಗೈದು ಮೋರಿಗೆ ಬಿಸಾಕಿತ್ತು. ಈ ಪ್ರಕರಣ ಸಂಬಂಧ ತನಿಖೆ ನಡೆಸಿ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಬೆನ್ನಲ್ಲೇ ತಮ್ಮ ವಿರುದ್ಧದ ಸುದ್ದಿ ಪ್ರಸಾದಕ್ಕೆ ನಿರ್ಬಂಧ ವಿಧಿಸುವಂತೆ ನಟ ದರ್ಶನ್ ಅವರು ತಮ್ಮ ವಕೀಲರ ಮೂಲಕ ಬೆಂಗಳೂರಿನ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅಥವಾ ಅವರ ಕುಟುಂಬದ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ಮುದ್ರಿಸುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡದಂತೆ ಮಾಧ್ಯಮಗಳು, ಅವರ ವರದಿಗಾರರು, ಆಂಕರ್‌ಗಳು ಅಥವಾ ಇತರ ಯಾವುದೇ ವ್ಯಕ್ತಿಗಳ ಬಗ್ಗೆ ಸುದ್ದಿ ನಿರ್ಬಂಧಿಸಿ ಆದೇಶಿಸಿದೆ.
ಬೆಂಗಳೂರು ಜನತೆ ಗಮನಕ್ಕೆ: ಜೂ.21, 22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut