ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನಗೆ ರಜಾತಿಥ್ಯ ನೀಡಿದ ಪ್ರಕರಣಕ್ಕೆ ಸಬಂಧಿಸಿದಂತೆ ಇದೀಗ ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ ವೇಲುಗೆ 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ 9ನೇ ಅಪರ ಮುಖ್ಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬೆಂಗಳೂರಿನ 9ನೇ ACMM ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಪೊಲೀಸರು ನಮಗೆ ಇನ್ನು ಸ್ವಲ್ಪ ದಿನ ಆರೋಪಿಗಳ ವಿಚಾರಣೆ ನಡೆಸೋದಿದೆ. ಹಾಗಾಗಿ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.