ಕಲಬುರ್ಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನ ಪ್ರಕರಣ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಕಲಬುರ್ಗಿ ಕೋರ್ಟ್ ತಡೆಯಾಜ್ಞೆ ನೀಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಏಕವಚನದಲ್ಲೇ ಮಾತನಾಡಿದ್ದಂತ ಚಕ್ರವರ್ತಿ ಸೂಲಿಬೆಲೆ, ಅಯೋಗ್ಯ ಎಂಬ ಪದವನ್ನು ಪ್ರಯೋಗ ಮಾಡಿ, ಅವಹೇಳನ ಮಾಡಿದ್ದರು. ಈ ಸಂಬಂಧ ರಾಯಚೂರು ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಾಗಿತ್ತು.

ಚಕ್ರವರ್ತಿ ಸೂಲಿ ಬೆಲೆ ವಿರುದ್ಧ ಕಲಬುರ್ಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ಈ ಪ್ರಕರಣಕ್ಕೆ ತಡೆ ಕೋರಿ ಚಕ್ರವರ್ತಿ ಸೂಲಿ ಬೆಲೆ ಅವರು ಕಲಬುರ್ಗಿ ಕೋರ್ಟ್ ಮೊರೆ ಹೋಗಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದಂತ ಕಲಬುರ್ಗಿ ಏಕ ಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕಲ್ ಅವರು, ಪೊಲೀಸರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಗೆ ತಡೆಯಾಜ್ಞೆ ನೀಡಿದ್ದಾರೆ.

ಕುಮಾರಸ್ವಾಮಿ ಅವರು ಜೆಡಿಎಸ್ ಅನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಇದು ಅಂಚೆ ಕಚೇರಿಯ ಅದ್ಭುತ ಯೋಜನೆ: ನೀವು ತುಂಬಾ ಬಡ್ಡಿಯನ್ನು ಪಡೆಯುತ್ತೀರಿ

Share.
Exit mobile version