ಬೆಂಗಳೂರು: ರಾಹುಲ್ ಗಾಂಧಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದನ್ನು ಖಂಡಿಸಿ ಬೆಂಗಳೂರಿನ ಇಡಿ ಕಚೇರಿಯ ಎದುರು ಸಿಎಂ, ಡಿಸಿಎಂ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 110 ಕಾಂಗ್ರೆಸ್ ನಾಯಕರು ಖುದ್ಧು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೀಡಿದಂತ ನೋಟಿಸ್ ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಸಚಿವರನ್ನು ಒಳಗೊಂಡು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೆಂಗಳೂರಲ್ಲಿ ಪ್ರತಿಭಟನೆಯನ್ನ ಇಡಿ ಕಚೇರಿ ಎದುರು ನಡೆಸಿದ್ದರು.
ಈ ಪ್ರತಿಭಟನೆ ಸಂಬಂಧ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಸೇರಿದಂತೆ 110 ಕಾಂಗ್ರೆಸ್ ಮುಖಂಡರಿಗೆ ಆಗಸ್ಟ್.29ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಲಾಗಿದೆ.
BREAKING: ಬೆಂಗಳೂರು ನಗರ, ಗ್ರಾಮಾಂತರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court
7ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ | 7th Pay Commission