ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ದಾಖಲಾಗಿದ್ದಂತ ಪ್ರಕರಣದಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ಧರಾಮಯ್ಯ ಅವರು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಿದೆ.
ಅಂದಹಾಗೇ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಇಡಿಯಿಂದ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.
ಈ ಪ್ರತಿಭಟನೆಯ ಹಿನ್ನಲೆಯಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಖುದ್ದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಮನ್ಸ್ ನೀಡಿದೆ.
BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court
7ನೇ ವೇತನ ಆಯೋಗ : ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ | 7th Pay Commission