ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿಯಲ್ಲಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿಂದ ಇಂದು ಮಧ್ಯಾಹ್ನ 3.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರ ಜಾಮೀನು ಅರ್ಜಿಯ ಸಂಬಂಧ ಕಾಯ್ದಿರಿಸಲಾಗಿದ್ದಂತ ತೀರ್ಪನ್ನು ಪ್ರಕಟಿಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವಂತ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರಾದಂತ ಬೀರಾದಾರ್ ದೇವೇಂದ್ರ ಅವರು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಂತ್ರ, ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು.
ಇಂತಹ ತೀರ್ಪನ್ನು ಇಂದು ನ್ಯಾಯಮೂರ್ತಿ ಬಿರಾದಾರ್ ದೇವೇಂದ್ರಪ್ಪ ಅವರು ಪ್ರಕಟಿಸಲಿದ್ದಾರೆ. ಇಂದು ಮಧ್ಯಾಹ್ನ 3.30ಕ್ಕೆ ತನ್ನ ತೀರ್ಪು ಪ್ರಕಟಿಸೋ ಅವರು, ಯಾವ ತೀರ್ಪು ನೀಡಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಅಂದಹಾಗೇ ಕನ್ನಡ ಕಹಳೆ ಮೊಳಗಿಸಿದ್ದಂತ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿತ್ತು. ವಾಣಿಜ್ಯ ಮಳಿಗೆಗಳ ನಾಮಫಲಕ ಒಡೆದು ಹಾಕಿದಂತ ಅವರ ವಿರುದ್ಧ ಕೇಸ್ ದಾಖಲಿಸಿ ಜೈಲಿಗಟ್ಟಲಾಗಿತ್ತು. ಸದ್ಯ ಸೆಂಟ್ರಲ್ ಜೈಲಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಇದ್ದಾರೆ. ಅವರ ಜಾಮೀನು ಅರ್ಜಿಯ ತೀರ್ಪು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ.
ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದ ‘ಮಾಜಿ ಪ್ರಧಾನಿ HDD’ಗೆ, ಈ ತಿರುಗೇಟು ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು