ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಇಂದು ಹೊಸದಾಗಿ 89 ಜನರಿಗೆ ಕೊರೋನಾ ಸೋಂಕು ತಗುಲಿದ್ದರೇ, ಸೋಂಕಿತರಾದಂತ 74 ಮಂದಿ ಗುಣಮುಖರಾಗಿದ್ದಾರೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕಲಬುರ್ಗಿ, ಮಂಡ್ಯ, ರಾಯಚೂರು, ರಾಮನಗರ, ಉತ್ತರ ಕನ್ನಡ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಅಂತ ಹೇಳಿದೆ.
ವಿಜಯನಗರದಲ್ಲಿ 05, ತುಮಕೂರು 08, ಶಿವಮೊಗ್ಗ 03, ಮೈಸೂರು 14, ಕೊಪ್ಪಳ 02, ಕೊಡಗು 04, ಹಾಸನ 05, ಗದಗ ಮತ್ತು ಧಾರವಾಡ 02, ಬೆಂಗಳೂರು ನಗರ 16 ಹಾಗೂ ಬೆಂಗಳೂರು ಗ್ರಾಮಾಂತರ 04 ಸೇರಿದಂತೆ 89 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಅಂತ ಹೇಳಿದೆ.
ಕಳೆದ 24 ಗಂಟೆಯಲ್ಲಿ 74 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈಗ 497 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. ಅಲ್ಲದೇ ಇಂದು ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿರೋದಾಗಿ ವರದಿಯಲ್ಲಿ ಉಲ್ಲೇಖಿಸಿದೆ.
ಡೀಪ್ಫೇಕ್ ವಿಡಿಯೋ ಮಾಡಿದ ಆರೋಪಿ ಬಂಧನ- ರಶ್ಮಿಕಾ ಮಂದಣ್ಣ ಹೇಳಿದ್ದನು?
BIG NEWS: ‘ಸಿದ್ಧಗಂಗಾ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡುವಂತೆ ‘ಕೇಂದ್ರ ಸರ್ಕಾರ’ಕ್ಕೆ ಪತ್ರ – ಸಿಎಂ ಸಿದ್ಧರಾಮಯ್ಯ