ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೋವಿಡ್ ಸೋಂಕಿನ ( Covid19 Case ) ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ. 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 820 ಸೇರಿದಂತೆ ರಾಜ್ಯಾಧ್ಯಂತ 858 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರ್ಗಿ, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿದೆ.
BIG BREAKING NEWS: ‘ಬಿಬಿಎಂಪಿ ವಾರ್ಡ್’ಗಳನ್ನು 243ಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ
ಇನ್ನೂ ಧಾರವಾಡ, ಮಂಡ್ಯ, ರಾಯಚೂರು, ತುಮಕೂರು ಮತ್ತು ಉಡುಪಿ ಜಿಲ್ಲೆಯಲ್ಲಿ ತಲಾ ಇಬ್ಬರಿಗೆ, ಕೋಲಾರ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ ಮೂವರಿಗೆ, ಮೈಸೂರು ಮತ್ತು ದಕ್ಷಿಣ ಕನ್ನಡ 07 ಹಾಗೂ ಬೆಂಗಳೂರು ನಗರದಲ್ಲಿ 820 ಮಂದಿ ಸಹಿತ 858 ಜನರಿಗೆ ಇಂದು ಕೊರೋನಾ ಪಾಸಿಟಿವ್ ಎಂದು ವರದಿಯಿಂದ ದೃಢಪಟ್ಟಿದೆ ಎಂದಿದೆ.
BREAKING NEWS: ಮಂಗಳೂರಿನಲ್ಲಿ ಮೂರು ಮಕ್ಕಳನ್ನು ಕೊಂದು ಪತ್ನಿ ಜೊತೆ ಪತಿ ಆತ್ಮಹತ್ಯೆಗೆ ಯತ್ನ
ಇಂದು 858 ಕೇಸ್ ಪತ್ತೆಯಾದ ಕಾರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3963633ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 682 ಸೇರಿದಂತೆ ಇದುವರೆಗೆ 3918452 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈಗ 5,067 ಸಕ್ರೀಯ ಸೋಂಕಿತರಿದ್ದಾರೆ. ಇಂದು ಬೆಂಗಳೂರಿನಲ್ಲಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 40,072ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.