ಬೆಳಗಾವಿ: ನಗರದ ಸುವರ್ಣಸೌಧದಲ್ಲಿ ವಿದೇಶಗಳಲ್ಲಿ ಕೋವಿಡ್ ಹೆಚ್ಚಳದ ಕಾರಣ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ರಾಜ್ಯಾಧ್ಯಂತ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ಹಾಗೂ 3ನೇ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇಂದು ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ತಜ್ಞರು, ಹಿರಿಯ ಅಧಿಕಾರಿಗಳ ಸಭೆ ಬಳಿಕ ಮಾಹಿತಿ ನೀಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಸಿಎಂ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು. ಜಾಗತಿಕ ಸ್ಥಿತಿಗತಿಗಳು ಹೇಗಿದೆ ಎನ್ನುವ ಬಗ್ಗೆ ಅಧ್ಯಯನ ಮಾಡಿ ವರದಿಯನ್ನು ನೀಡಲಾಗಿದೆ. ಅದರ ಆಧಾರದಲ್ಲಿ ನಮ್ಮ ರಾಜ್ಯದಲ್ಲಿ ಮುನ್ನಚ್ಚರಿಕೆ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ. ಅದರಲ್ಲಿ ಐಎಲ್ಐ ಮತ್ತು ಸಾರಿ ಪ್ರಕರಣದಲ್ಲಿ ಕಡ್ಡಾಯವಾಗಿ ಟೆಸ್ಟಿಂಗ್ ಮಾಡುವಂತೆ ತೀರ್ಮಾನ ಮಾಡಲಾಗಿದೆ. ಮಾಸ್ಕ್ ಅನ್ನು ಒಳಾಂಗಣ ಪ್ರದೇಶದಲ್ಲಿ ಧರಿಸಬೇಕು ಎಂಬುದಾಗಿ ಸಲಹೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ವಿದೇಶದಿಂದ ಬರುವವರಿಗೆ ಎಷ್ಟು ಪ್ರಮಾಣದಲ್ಲಿ ಟೆಸ್ಟಿಂಗ್ ಮಾಡಬೇಕು ಎಂಬುದಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಟೆಸ್ಟಿಂಗ್ ಮಾಡಲಾಗುತ್ತದೆ. ಆಕ್ಸಿಜನ್ ಪ್ಲಾಂಟ್ಸ್ ಅನ್ನು ಅಳವಡಿಸಲಾಗಿದೆಯೋ ಅದೆಲ್ಲವೂ ಕೂಡ ಸರಿಯಾದ ರೀತಿಯಲ್ಲಿ ಸರಿ ಮಾಡುವಂತ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ನಮ್ಮ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಹಾಸಿಕೆ ರಿಸರ್ವೇಶನ್ ಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಇದಲ್ಲದೇ ಖಾಸಗೀ ಆಸ್ಪತ್ರೆಯಲ್ಲಿ ಕೋವಿಡ್ ಬೆಡ್ ಗಳನ್ನು ಮೀಸಲಿಡುವಂತೆ ಸೂಚಿಸಲಾಗಿದೆ ಎಂದರು.
ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಮೂರನೇ ಡೋಸ್ ಲಸಿಕಾಕರಣಕ್ಕೆ ವಿಶೇಷ ಒತ್ತನ್ನು ನೀಡಬೇಕು ಎಂದು ತೀರ್ಮಾನಿಸಲಾಗಿದೆ. ಕೋವಿಡ್ ಕಡಿಮೆಯಾದ ನಂತ್ರ ಮೂರನೇ ಡೋಸ್ ಹಾಕಿಸಿಕೊಳ್ಳಲು ಮುಂದೆ ಬಂದು ಹಾಕಿಸಿಕೊಳ್ಳೋದು ಕಡಿಮೆಯಾಗಿತ್ತು. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ 3ನೇ ಡೋಸ್ ಲಸಿಕೆ ಪಡೆಯಲು ವಿಶೇಷ ಕ್ಯಾಂಪ್ ಮಾಡಿ, ನೀಡೋದಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಜನರು ಮೂರನೇ ಡೋಸ್ ಅನ್ನು ಆದಷ್ಟು ಶೀಘ್ರವೇ ತೆಗೆದುಕೊಳ್ಳಬೇಕು. ಕೋವಿಡ್ ಬಗ್ಗೆ ಇರುವಂತ ಉದಾಸೀನತೆಯನ್ನು ಬಿಡಬೇಕು. 3ನೇ ಡೋಸ್ ಬಗ್ಗೆ ಅಂತೆ-ಕಂತೆ ವಿಚಾರಗಳನ್ನು ಕೈಬಿಡಬೇಕು. ಲಸಿಕೆಯಿಂದ ಯಾವುದೇ ಅಪಾಯವಿಲ್ಲ. ಇದು ವೈಜ್ಞಾನಿಕವಾಗಿಯೂ ದೃಢಪಟ್ಟಿಲ್ಲ. ನೀವೆಲ್ಲರೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದರು.