ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಚಿಕಿತ್ಸಾ ವ್ಯವಸ್ಥೆಯ ಸುಸ್ಥಿತಿ ಪರಿಶೀಲನೆ ಮಾಡುವಂತ ನಿಟ್ಟಿನಲ್ಲಿ, ಇಂದು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಕ್ರಮ, ಸಾಧನ, ಸಿಬ್ಬಂದಿ ಕಾರ್ಯಾಚರಣೆಯ ಅಣಕು ( ಮಾಕ್ ಡ್ರಿಲ್) ನಡೆಸಲಾಗುತ್ತದೆ.
ವಿಶ್ವದ ಅನೇಕ ದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಾರತದಲ್ಲಿಯೂ ನಿಧಾನಗತಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕೂಡ ಏರು ಗತಿಯಲ್ಲಿ ಸಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಇಂದು ಮಾಕ್ ಡ್ರಿಲ್ ನಡೆಸಲಾಗುತ್ತದೆ.
ಅಂದಹಾಗೇ ಇಂದು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂದಿ, ತುರ್ತು ವ್ಯವಸ್ಥೆಗಳು ಸರಿಯಾಗಿ ಇದ್ದಾವ ಎನ್ನುವುದನ್ನು ಪರಿಶೀಲನೆ ನಡೆಸಲಾಗುತ್ತದೆ. ಒಂದು ವೇಳೆ ಏನಾದರೂ ತಾಂತ್ರಿಕ ಸಮಸ್ಯೆ ಇದ್ದರೇ ಅದನ್ನು ಸರಿ ಪಡಿಸುವಂತ ಕೆಲಸ ಮಾಡಲಾಗುತ್ತದೆ.
‘SSLC ಪಾಸ್ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಡಿ.28ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’