ಕಾರವಾರ: ಚೀನಾದಲ್ಲಿ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಫುಲ್ ಅಲರ್ಟ್ ಆಗಿದೆ.
ಈಗಾಗಲೇ ರಾಜ್ಯ ಸರ್ಕಾರ ಇದಿನಿಂದ ಕೋವಿಡ್ ನಿಯಮ ಜಾರಿಗೆ ತಂದಿದ್ದಾರೆ.ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದರೆ ಇದೀಗ ಕಾರವಾರದಲ್ಲಿ ಸರ್ಕಾರದ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ.ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಜನ ಓಡಾಡುತ್ತಿದ್ದಾರೆ.
ಕಾರವಾರ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ಕೋವಿಡ್ ರೂಲ್ಸ್ ಮಾಯವಾಗಿದೆ. ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಪ್ರವಾಸಿ ಸ್ಥಳಗಳಲ್ಲಿ ಕೋವಿಡ್ ರೂಲ್ಸ್ ಪಾಲನೆ ಮಾಡಲಾಗುತ್ತಿಲ್ಲ. ಹೊಸ ವರ್ಷ ಸಂಭ್ರಮಾಚರಣೆಗೆ ಬೇರೆ ಬೇರೆ ದೇಶಗಳಿಂದ, ರಾಜ್ಯಗಳಿಂದ ಬಂದಿರುವ ಪ್ರವಾಸಿಗರು ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೋಜು ಮಸ್ತಿಯಲ್ಲಿ ಮುಳುಗಿದ್ದಾರೆ.